ಪಾಕಿಸ್ತಾನ: ಸಿಂಧ್‌ನ ಕೊಟ್ರಿಯಲ್ಲಿ ಅಪರಿಚಿತರಿಂದ ಹಿಂದೂ ದೇವಾಲಯದ ಮೇಲೆ ದಾಳಿ, ಚಿನ್ನಾಭರಣ ದೋಚಿ ಪರಾರಿ

ಇಸ್ಲಾಮಾಬಾದ್: ನವರಾತ್ರಿ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ಮಾಡುತ್ತಿದ್ದಾಗಲೇ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದದ್ದು ಚರ್ಚೆಯಾಗುತ್ತಿರುವಾಗಲೇ ಈಗ ಪಾಕಿಸ್ತಾನದಲ್ಲಿಯೂ ಹಿಂದೂ ದೇವಸ್ಥಾನದ ಮೇಲೆ ದಾಳಿ ಮಾಡಲಾಗಿದೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಕೋಟ್ರಿ ಬಳಿ ಇರುವ ದೇವಿಯ ಮಂದಿರಕ್ಕೆ ನುಗ್ಗಿದ ದುಷ್ಕರ್ಮಿಗಳು  ದೇವಾಲಯವನ್ನು ಅಪವಿತ್ರಗೊಳಿಸಿ ದೇವಿಯ ವಿಗ್ರಹದ ಮೇಲಿದ್ದ ಚಿನ್ನಾಭರಣ ಮತ್ತು ಹಣ ದೋಚಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇಂಡಸ್ ನದಿ ತೀರದ ಬಳಿಯ ದೇವಿಯ ದೇಗುಲಕ್ಕೆ ನುಗ್ಗಿ ಚಿನ್ನಾಭರಣ ಮತ್ತು ನಗದನ್ನು ದೋಚಿಕೊಂಡು ಹೋಗಿರುವುದಾಗಿ ಕೋಟ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಆ ಹಿಂದೂ ದೇವಾಲಯದ ಉಸ್ತುವಾರಿ ವಹಿಸಿಕೊಂಡಿರುವ ಭಗವಾನ್ ದಾಸ್ ದೂರು ನೀಡಿದ್ದಾರೆ.ಈ ಹಿಂದೆ ಜನವರಿಯಲ್ಲಿಯೂ ಗುರು ಬಾಲಿಮಾಕ್ ದೇವಾಲಯದಲ್ಲಿ ಕೂಡ ಚಿನ್ನಾಭರಣ ಮತ್ತು ದೇವರ ಕಿರೀಟ ದೋಚಲಾಗಿತ್ತು.
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ಗೂಂಡಾಗಳು ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿದ್ದರು. ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದಾಗ ಅಪರಿಚಿತರ ಗುಂಪೊಂದು ದೇವಸ್ಥಾನದ ಮೇಲೆ ದಾಳಿ ನಡೆಸಿತ್ತು.

ಪ್ರಮುಖ ಸುದ್ದಿ :-   ವೀಡಿಯೊ...| ಇಂಟರ್ನೆಟ್ ನಲ್ಲಿ ಭಾರೀ ಗಮನ ಸೆಳೆದ ರೋಬೋಟ್ ನಾಯಿ ಡ್ಯಾನ್ಸ್‌ ಮಾಡುವ ವೀಡಿಯೊ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement