ಪುನೀತ್ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿವಿಧಾನ ನೆರವೇರಿಸುವ ವಿನಯ ರಾಜ್‌ಕುಮಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪಾರ್ಥಿವ ಶರೀರದ ಅಂತಿಮ ವಿಧಿವಿಧಾನವನ್ನು ರಾಘವೇಂದ್ರ ರಾಜಕುಮಾರ್ ಅವರ ಪುತ್ರ. ವಿನಯ್ ರಾಜ್‌ಕುಮಾರ್ ನೆರವೇರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಘವೇಂದ್ರ ರಾಜಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜಕುಮಾರ್ ಅವರು ಚಿಕ್ಕಪ್ಪನ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವ ಕುರಿತು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಪುನೀತ್ ರಾಜಕುಮಾರ್ ಅವರಿಗೆ ಇಬ್ಬರು ಹೆಣ್ಣು ಮಕ್ಕಳು. ಹೀಗಾಗಿ ಪಾರ್ಥೀವ ಶರೀರದ ವಿಧಿ ವಿಧಾನಗಳನ್ನು ವಿನಯ್ ನೆರವೇರಿಸಲಿದ್ದಾರೆ ಎಂದು ಕುಟುಂಬದ ಸಮೀಪವರ್ತಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.
ಇಂದು ಸಂಜೆ ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್ ರಾಜಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.

5 / 5. 1

ಪ್ರಮುಖ ಸುದ್ದಿ :-   ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

ನಿಮ್ಮ ಕಾಮೆಂಟ್ ಬರೆಯಿರಿ

advertisement