ಮೊದಲ ಬಾರಿಗೆ ಪೋಪ್ ಫ್ರಾನ್ಸಿಸ್ ಭೇಟಿ ಮಾಡಿದ ಪ್ರಧಾನಿ ಮೋದಿ: 20 ನಿಮಿಷ ನಿಗದಿಯಾದ ಮಾತುಕತೆ 1 ಗಂಟೆ ವಿಸ್ತರಣೆ..!

ನವದೆಹಲಿ: ಜಿ-20 ಶೃಂಗಸಭೆಗಾಗಿ ರೋಮ್ ಭೇಟಿಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು. ಪೋಪ್ ಫ್ರಾನ್ಸಿಸ್ ಅವರೊಂದಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದೆ.
ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವುದು ಮತ್ತು ಬಡತನವನ್ನು ತೊಡೆದುಹಾಕುವುದು ಸೇರಿದಂತೆ ಜನಜೀವನವನ್ನು ಉತ್ತಮಗೊಳಿಸುವ ಗುರಿಯನ್ನು ಹೊಂದಿರುವ ವ್ಯಾಪಕ ವಿಷಯಗಳ ಕುರಿತು ಪ್ರಧಾನಿ ಮೋದಿ ಮತ್ತು ಪೋಪ್ ಚರ್ಚಿಸಿದರು. ಪೋಪ್ ಫ್ರಾನ್ಸಿಸ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಆಹ್ವಾನ ನೀಡಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡುವಾಗ ಪ್ರಧಾನಿ ಮೋದಿ ಜೊತೆಗಿದ್ದರು.
ಮೂಲಗಳ ಪ್ರಕಾರ ಕೇವಲ ಇಪ್ಪತ್ತು ನಿಮಿಷಗಳ ಕಾಲ ನಿಗದಿಯಾಗಿದ್ದ ಸಭೆ ಒಂದು ಗಂಟೆ ಕಾಲ ನಡೆಯಿತು.
1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಪೋಪ್ ಜಾನ್ ಪಾಲ್ II ಭಾರತಕ್ಕೆ ಬಂದಿದ್ದರು. ಈಗ, ಪ್ರಧಾನಿ ಮೋದಿಯವರ ಅವಧಿಯಲ್ಲಿ ಪೋಪ್ ಅವರನ್ನು ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಲಾಗಿದೆ.ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅಕ್ಟೋಬರ್ 29 ರಿಂದ 31 ರ ವರೆಗೆ ವ್ಯಾಟಿಕನ್ ಸಿಟಿಗೆ ಭೇಟಿ ನೀಡುತ್ತಿದ್ದಾರೆ.
ಗುರುವಾರದ ನಿರ್ಗಮನ ಹೇಳಿಕೆಯಲ್ಲಿ ಮೋದಿ ಅವರು ಅಕ್ಟೋಬರ್ 29-31 ರವರೆಗೆ ರೋಮ್ ಮತ್ತು ವ್ಯಾಟಿಕನ್ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದರು.
ನನ್ನ ಇಟಲಿಗೆ ಭೇಟಿಯ ಸಮಯದಲ್ಲಿ, ನಾನು ವ್ಯಾಟಿಕನ್ ನಗರಕ್ಕೆ ಭೇಟಿ ನೀಡುತ್ತೇನೆ, ಕ್ರೈಸ್ತ ಧರ್ಮ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡುತ್ತೇನೆ ಮತ್ತು ವಿದೇಶಾಂಗ ಕಾರ್ಯದರ್ಶಿ ಹಿಸ್ ಎಮಿನೆನ್ಸ್ ಕಾರ್ಡಿನಲ್ ಪಿಯೆಟ್ರೋ ಪರೋಲಿನ್ ಅವರನ್ನು ಭೇಟಿ ಮಾಡುತ್ತೇನೆ” ಎಂದು ಮೋದಿ ಹೇಳಿದರು.

ಪ್ರಮುಖ ಸುದ್ದಿ :-   ವೀಡಿಯೋ..| ಎರಡೂ ಕೈತೋಳುಗಳಿಲ್ಲದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆದ ಏಷ್ಯಾದ ಮೊದಲ ಮಹಿಳೆ ಇವರು : ಕೇರಳದ ಯುವತಿಯ ಕಾರ್‌ ಚಾಲನೆಗೆ ಬೆರಗಾಗ್ತೀರಾ..!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement