ಉಪಚುನಾವಣೆ: ಹಾನಗಲ್‍ನಲ್ಲಿ 80%, ಸಿಂದಗಿಯಲ್ಲಿ70% ಮತದಾನ

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಶನಿವಾರ ಮುಗಿದಿದ್ದು, ಬಹುತೇಕ ಶಾಂತಿಯುತವಾಗಿ ನಡೆದಿದೆ.
ಹಾನಗಲ್‍ನಲ್ಲಿ ಶೇಕಡಾ 80 ರಷ್ಟು ಮತ್ತು ಸಿಂದಗಿಯಲ್ಲಿ ಶೇಕಡಾ 70 ರಷ್ಟು ಮತದಾನವಾಗಿದೆ. ಹಾನಗಲ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾನಗಲ್‌ನಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನ, ಕಾಂಗ್ರೆಸ್‌ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್‌ನಿಂದ ರಿಯಾಜ್ ಶೇಖ್ ಸ್ಪರ್ಧಿಸಿದ್ದಾರೆ.
ಸಿಂದಗಿಯಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರ, ಕಾಂಗ್ರೆಸ್ಸಿನಿಂದ ಅಶೊಕ್ ಮನಗೂಳಿ ಸ್ಪರ್ಧಿಸಿದ್ದಾರೆ. ಬೊರಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಫೋಟೋ ಚಿನ್ಹೆ ಇರುವ ಮತ ಸಂಖ್ಯೆ ಚೀಟಿ ನೀಡಿದ ಆರೋಪ ಮೇಲೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2 ಕ್ಷೇತ್ರಗಳ ಉಪಚುನಾವಣೆ ರಾಜ್ಯದಲ್ಲಿ ಪಕ್ಷಗಳ ನಾಯಕರ ವಾಕ್ಸಮರಕ್ಕೆ ವೇದಿಕೆಯಾಗಿತ್ತು. ನವೆಂಬರ್ 2ಕ್ಕೆ ಫಲಿತಾಂಶ ಬರಲಿದೆ.

0 / 5. 0

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement