ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ತೀವ್ರ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಣಮುಖರಾಗಿದ್ದು, ಆಸ್ರತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಈ ತಿಂಗಳ ಆರಂಭದಲ್ಲಿ ಅನಾರೋಗ್ಯದಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಕ್ಟೋಬರ್ 13 ರಂದು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಡೆಂಗೆ ಜ್ವರ ಪತ್ತೆಯಾಗಿತ್ತು. ಅವರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಮನೆಯಲ್ಲಿ ಡಾ.ಸಿಂಗ್ ಅವರಿಗೆ ನುರಿತ ವೈದ್ಯರೊಬ್ಬರು ವೈದ್ಯಕೀಯ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಏಪ್ರಿಲ್‌ನಲ್ಲಿ ಅವರು ಕೊರೊನಾ ಸೋಂಕಿಗೆ ತುತ್ತಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡಿದ್ದರು.

 

0 / 5. 0

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement