ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಲು ಒತ್ತಾಯಿಸಿ ಸಿಎಂಗೆ ಹೊರಟ್ಟಿ ಪತ್ರ

ಹುಬ್ಬಳ್ಳಿ: ನವಂಬರ್‌ ಕೊನೆಯಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಐಇ ಅವರಿಗೆ ಪತ್ರ ಬರೆದಿದ್ದಾರೆ.
ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ 25 ಸದಸ್ಯರುಗಳು 2022 ರ ಜನೆವರಿ 5 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಬಾರಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸುವ ಕುರಿತು ಈಗಾಗಲೇ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಲಾಗಿದ್ದು ಅವರು ಸಹ ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಅಲ್ಲದೇ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಕುರಿತು ಮಾಧ್ಯಮಗಳಲ್ಲಿ ಹೇಳಿಕೆಗಳು ಪ್ರಕಟಗೊಂಡಿವೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನವಂಬರ್‌ ತಿಂಗಳಾಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ನಡೆಸುವಂತೆ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಮುಖೇನ ಒತ್ತಾಯಿಸಿದ್ದಾರೆ.
ಇದರಿಂದ ಜನವರಿ ಮೊದಲ ವಾರದಲ್ಲಿ ನಿವೃತ್ತಿಗೊಳ್ಳಲಿರುವ 25 ವಿಧಾನ ಪರಿಷತ್ತಿನ ಸದಸ್ಯರಿಗೆ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದ್ದು, ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಅವರಿಗೆ ಅನುಕೂಲವಾಗುವುದು. ಈ ನಿಟ್ಟಿನಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯುವ ದಿನಾಂಕವನ್ನು ಮೊದಲೇ ಪ್ರಕಟಿಸುವಂತೆ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳನ್ನು ಕೋರಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement