ಟ್ವಿಟ್ಟರಿನಲ್ಲಿ ವಿರಾಟ್ ಕೊಹ್ಲಿ 10 ತಿಂಗಳ ಮಗಳನ್ನು ಅತ್ಯಾಚಾರ ಮಾಡುವ ಬೆದರಿಕೆ ಹಾಕಿದ ಕಿರಾತಕರು..!

ನವದೆಹಲಿ: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ 10 ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿರುವ ಈಗ ಅಳಿಸಲಾದ ಟ್ವೀಟ್ ಕ್ರಿಕೆಟ್‌ಗೆ ಸಂಬಂಧವಿಲ್ಲದವರ ಗಮನ ಸೆಳೆದಿದೆ. ಭಾರತೀಯ ನಾಯಕ ವಿರಾಟ್‌ ಕೊಹ್ಲಿ ಅವರು ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಬೆಂಬಲಕ್ಕೆ ನಿಂತಿದ್ದಕ್ಕೆ ಅಸಹ್ಯಕರ ಪೋಸ್ಟ್‌ನ ಸ್ಕ್ರೀನ್‌ಶಾಟ್ ಇಂಟರ್ನೆಟ್‌ನಲ್ಲಿ ರೌಂಡ್ ಮಾಡಲಾರಂಭಿಸಿತು. ಹಲವಾರು ಮಾಧ್ಯಮ … Continued

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ; ಮೊದಲ ಶ್ರೇಣಿ ಹಂಚಿಕೊಂಡ ಮೂವರು, ಅಭ್ಯರ್ಥಿಗಳ ನೋಂದಾಯಿತ ಇಮೇಲ್‌ಗೆ ಫಲಿತಾಂಶ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗಿದೆ. ವೈದ್ಯಕೀಯ ಕೋರ್ಸ್​ಗೆ ಪ್ರವೇಶಕ್ಕಾಗಿ ನಡೆಯುವ ನೀಟ್​ ಪರೀಕ್ಷೆಯ ಫಲಿತಾಂಶ ಇಂದು (ನವೆಂಬರ್ 1) ಪ್ರಕಟವಾಗಿದೆ. ನೀಟ್ ಪದವಿ ಕೋರ್ಸ್​ ಫಲಿತಾಂಶ ಘೋಷಣೆಗೆ ಸುಪ್ರೀಂಕೋರ್ಟ್ ಈ ಮೊದಲು ಅವಕಾಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಈಗ ಫಲಿತಾಂಶ ಪ್ರಕಟವಾಗಿದೆ. ನೀಟ್‌ (NEET) ಫಲಿತಾಂಶವನ್ನು ಅಭ್ಯರ್ಥಿಗಳಿಗೆ ಅವರ ನೋಂದಾಯಿತ … Continued

ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ಆಸ್ಟ್ರೇಲಿಯಾ ಮಾನ್ಯತೆ

ನವದೆಹಲಿ: ಆಸ್ಟ್ರೇಲಿಯಾದ ಥೆರಪೆಟಿಕ್ ಗೂಡ್ಸ್ ಅಡ್ಮಿನಿಸ್ಟ್ರೇಷನ್ (ಟಿಜಿಎ) ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ ಕೊವಿಡ್ 19 ವಿರುದ್ಧದ ಲಸಿಕೆಯನ್ನು ಅಂಗೀಕರಿಸಿದೆ. ಈ ಲಸಿಕೆಯು ಆಸ್ಟ್ರೇಲಿಯಾದಲ್ಲಿ ರಿಜಿಸ್ಟರ್ ಆಗಿಲ್ಲ. ಆದರೆ ಗಣನೀಯ ಪ್ರಮಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ಈ ಲಸಿಕೆಯನ್ನು ಹಾಕಿಸಿಕೊಂಡಿರುವುದನ್ನು ಗುರುತಿಸಿ ಆಸ್ಟ್ರೇಲಿಯಾ ನಿರ್ಧಾರ ಕೈಗೊಂಡಿದೆ. ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಜೊತೆಗೆ ಚೀನಾದ BBIBP- CorV ಕೂಡ ಆಸ್ಟ್ರೇಲಿಯಾದ … Continued

2013ರ ನರೇಂದ್ರ ಮೋದಿ ಪಾಟ್ನಾ ಸಮಾವೇಶದಲ್ಲಿ ಸರಣಿ ಸ್ಫೋಟ ಪ್ರಕರಣ: ನಾಲ್ವರಿಗೆ ಗಲ್ಲು, ಇಬ್ಬರಿಗೆ ಜೀವಾವಧಿ ಶಿಕ್ಷೆ

ಪಾಟ್ನಾ: 2013ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶದ ಸಮಯದಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸರಣಿ ಬಾಂಬ್​​​ ಸ್ಫೋಟ ಪ್ರಕರಣದ ಒಂಬತ್ತು ಅಪರಾಧಿಗಳ ಪೈಕಿ ನಾಲ್ವರಿಗೆ ರಾಷ್ಟ್ರೀಯ ತನಿಖಾ ದಳ(ಎನ್​ಐಎ)ದ ವಿಶೇಷ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ. ಕಳೆದ ವಾರ ನ್ಯಾಯಾಲಯವು 10 ಆರೋಪಿಗಳ ಪೈಕಿ ಒಂಬತ್ತು ಆರೋಪಿಗಳಾದ ಹೈದರ್ ಅಲಿ ಅಲಿಯಾಸ್ ‘ಬ್ಲ್ಯಾಕ್ … Continued

ಜನಪ್ರಿಯ ನಟ ಪುನೀತ್ ರಾಜಕುಮಾರ ಸಾವಿನ ನಂತರ ಹೃದಯ ತಪಾಸಣೆಗೆ ಮುಗಿಬಿದ್ದ ಬೆಂಗಳೂರು-ಮೈಸೂರು ಜನ..!

posted in: ರಾಜ್ಯ | 0

ಬೆಂಗಳೂರು : ಜನಪ್ರಿಯ ನಟ ಪುನೀತ್ ರಾಜ್‍ಕುಮಾರ್ ಎಳೆಯ ವಯಸ್ಸಿನಲ್ಲೇ ಹೃದಯಾಘಾತದಿಂದ ನಿಧನರಾದ ಬಳಿಕ ಜನರಲ್ಲಿ ತಮ್ಮ ಆರೋಗ್ಯದ ಕಾಳಜಿ ಹೆಚ್ಚಾಗಿದೆ. ಬೆಂಗಳೂರು ಹಾಗೂ ಮೈಸೂರಿನ ಆಸ್ಪತ್ರೆಗಳಿಗೆ ಹೃದಯ ಸಂಬಂಧಿ ತಪಾಸಣೆಗೆ ಶೇಕಡಾ 25 ರಷ್ಟು ಜನರು ಬರುವುದು ಹೆಚ್ಚಾಗಿದೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕರಾ ಡಾ|| ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ … Continued

ಪಟಾಕಿಗಳ ಬಳಕೆ ಸಂಪೂರ್ಣ ನಿಷೇಧ ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಪಟಾಕಿಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸುವ ಕೋಲ್ಕತ್ತಾ ಹೈಕೋರ್ಟ್‌ನ ಇತ್ತೀಚಿನ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ಅಜಯ್ ರಸ್ತೋಗಿ ಅವರಿದ್ದ ವಿಶೇಷ ರಜಾಕಾಲದ ಪೀಠವು ಮಾಲಿನ್ಯಕಾರಕ ವಸ್ತುಗಳನ್ನು ಬಳಸುವ ಪಟಾಕಿಗಳ ಬಳಕೆಯನ್ನು ನಿಯಂತ್ರಿಸುವ ಆದೇಶವನ್ನು ಸುಪ್ರೀಂ ಕೋರ್ಟ್ ಈಗಾಗಲೇ ಜಾರಿಗೊಳಿಸಿದೆ ಮತ್ತು ಪಟಾಕಿಗಳ ಮೇಲೆ ಸಂಪೂರ್ಣ … Continued

ವಿವಾದಿತ 3 ಕೃಷಿ ಕಾನೂನುಗಳನ್ನು ರದ್ದುಪಡಿಸಲು ಕೇಂದ್ರ ಸರ್ಕಾರಕ್ಕೆ ನ.26ರ ವರೆಗೆ ಗಡುವು ನೀಡಿದ ಟಿಕಾಯತ್‌

ಗಾಜಿಯಾಬಾದ್: ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಕಾನೂನುಗಳನ್ನು ನವೆಂಬರ್ 26ರೊಳಗೆ ಕೇಂದ್ರಸರ್ಕಾರ ರದ್ದು ಪಡಿಸಬೇಕು. ಇಲ್ಲವಾದರೆ ದೆಹಲಿಯ ಗಡಿ ಭಾಗದಲ್ಲಿ ರೈತರು ಹೋರಾಟವನ್ನು ತೀವ್ರಗೊಳಿಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್‍ನ ಮುಖ್ಯಸ್ಥ ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ … Continued

ಕರ್ನಾಟಕದಲ್ಲಿ 188 ಹೊಸದಾಗಿ ಕೊರೊನಾ ದೃಢ; 2 ಮಂದಿ ಸಾವು

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸೋಮವಾರ ಹೊಸದಾಗಿ 188 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ ಹಾಗೂ ಇಂದು 318 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,88,521 ಕ್ಕೆ ಏರಿಕೆಯಾಗಿದೆ. ಒಟ್ಟು 29,41,896 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಹಾಗೂ ರಾಜ್ಯದಲ್ಲಿ ಈವರೆಗೆ … Continued

ನಾಳೆ ಪುನೀತ್ ಸಮಾಧಿಗೆ ಕುಟುಂಬಸ್ಥರಿಂದ ಹಾಲು ತುಪ್ಪ ಕಾರ್ಯ: ಕಂಠೀರವ ಸ್ಟುಡಿಯೋ ಬಳಿ ಬಿಗಿ ಭದ್ರತೆ

posted in: ರಾಜ್ಯ | 0

ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ ನಾಲ್ಕು ದಿನ ಕಳೆದಿದ್ದು, 5ನೇ ದಿನವಾದ ಮಂಗಳವಾರ ಹಾಲು ತುಪ್ಪ ಕಾರ್ಯ ನಡೆಯಲಿದ್ದು, ಅದು ಮುಗಿಯುವವರೆಗೂ ಸಮಾಧಿ ವೀಕ್ಷಣೆಗೆ ಸಾರ್ವಜನಿಕರನ್ನು ನಿರ್ಬಂಧಿಸಲಾಗಿದೆ. ನಾಳೆ ಸಮಾಧಿ ವೀಕ್ಷಣೆಗಾಗಿ ಹೆಚ್ಚು ಸಂಖ್ಯೆಯಲ್ಲಿ ಅಭಿಮಾನಿಗಳು ಬರುವ ಸಾಧ್ಯತೆ ಇರುವ ಕಾರಣ ಕಂಠೀರವ ಸ್ಟೂಡಿಯೋ ಬಳಿ ಪೊಲೀಸರು ಬಿಗಿ ಭದ್ರತೆಗೊಳಿಸಿದ್ದಾರೆ. ಈಗಾಗಲೇ ಪುನೀತ್ ಅವರ … Continued

ನಟ ಪುನೀತ್‌ ರಾಜಕುಮಾರಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸಿದ್ದರಾಮಯ್ಯ ಒತ್ತಾಯ

posted in: ರಾಜ್ಯ | 0

ಬೆಂಗಳೂರು: ಅಕಾಲಿಕ ಮರಣ ಹೊಂದಿದ ಪ್ರತಿಭಾವಂತ ಸಿನೆಮಾ ನಟ ಪುನೀತ್‌ ರಾಜಕುಮಾರ ಅವರಿಗೆ ಅವರಿಗೆ ಪದ್ಮಶ್ರೀ ಪ್ರಶಸ್ತಿ (padmashri award) ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ತುಮಕೂರಿನ ಗುಬ್ಬಿಯಲ್ಲಿ ಮಾತನಾಡಿದ ಅವರು, ತಾನು ಈ ಸಂಬಂಧ ಕೇಂದ್ರ ಸರ್ಕಾರ ಪತ್ರ ಬರೆಯಲಿದ್ದೇನೆ ಎಂದು ತಿಳಿಸಿದರು. ಪುನೀತ್ ರಾಜ್ … Continued