ಕಾರು ಅಪಘಾತ:ಮಿಸ್ ಕೇರಳ 2019 ಆನ್ಸಿ ಕಬೀರ್, ರನ್ನರ್ ಅಪ್ ಅಂಜನಾ ಶಾಜನ್ ಸಾವು

ತಿರುವನಂತಪುರಂ: ಕೇರಳದಲ್ಲಿ ನಿನ್ನೆ (ಭಾನುವಾರ) ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಖ್ಯಾತ ರೂಪದರ್ಶಿಯರು ಸಾವಿಗೀಡಾಗಿದ್ದಾರೆ.
ಮಿಸ್ ಕೇರಳ 2019 ಪ್ರಶಸ್ತಿ ವಿಜೇತೆ ಆನ್ಸಿ ಕಬೀರ್ ಮತ್ತು ರನ್ನರ್ ಅಪ್ ಅಂಜನಾ ಶಾಜನ್ ಭಾನುವಾರು ಮಧ್ಯರಾತ್ರಿ ವೈಟ್ಟಿಲಾ-ಪಾಲಾರಿವಟ್ಟಂ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನಲ್ಲಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಕ್ಕರಪರಂಬುವಿನಲ್ಲಿ ಹಾಲಿಡೇ ಇನ್ ಬಳಿ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ನಿಯಂತ್ರಣ ತಪ್ಪಿದ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಆನ್ಸಿ ಮತ್ತು ಅಂಜನಾ ಸ್ಥಳದಲ್ಲೇ ಮೃತಪಟ್ಡಿದ್ದಾರೆ. ದ್ವಿಚಕ್ರ ವಾಹನ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಪಾಲಾರಿವಟ್ಟಂ ಪೊಲೀಸರು ತಿಳಿಸಿದ್ದಾರೆ.
ರೂಪದರ್ಶಿ ಫೋಟೋ ಸೆಷನ್‌ಗಾಗಿ ಆನ್ಸಿ ತಿರುವನಂತಪುರಂನಿಂದ ಮತ್ತು ಅಂಜನಾ ತ್ರಿಶೂರ್‌ನಿಂದ ಕೊಚ್ಚಿಗೆ ಬಂದಿದ್ದರು. ಅಲ್ಲಿಂದ ತ್ರಿಶೂರ್‌ಗೆ ತೆರಳುತ್ತಿದ್ದಾಗ ಅಪಘಾತ ವಲಯವಾದ ಚಕ್ಕರಪರಂಬು ಜಂಕ್ಷನ್ನಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಗುರುತು ಹಿಡಿಯಲಾಗದಷ್ಟು ನಜ್ಜುಗುಜ್ಜಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಬೀದಿ ನಾಯಿಯ ಮೇಲೆ ಚಿರತೆ ದಾಳಿ; ಸ್ನೇಹಿತನ ರಕ್ಷಣೆಗಾಗಿ ಚಿರತೆಯ ಮೇಲೆ ಪ್ರತಿದಾಳಿ ನಡೆಸಿ ಓಡಿಸಿದ ನಾಯಿಗಳ ಹಿಂಡು...!

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement