ಕರ್ನಾಟಕದಲ್ಲಿ 188 ಹೊಸದಾಗಿ ಕೊರೊನಾ ದೃಢ; 2 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸೋಮವಾರ ಹೊಸದಾಗಿ 188 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ ಹಾಗೂ ಇಂದು 318 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,88,521 ಕ್ಕೆ ಏರಿಕೆಯಾಗಿದೆ. ಒಟ್ಟು 29,41,896 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಹಾಗೂ ರಾಜ್ಯದಲ್ಲಿ ಈವರೆಗೆ 38,084 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8,512 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 95 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,281 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,478 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 95, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 2, ಚಿತ್ರದುರ್ಗ 4, ದಕ್ಷಿಣ ಕನ್ನಡ 12, ದಾವಣಗೆರೆ 1, ಧಾರವಾಡ 0, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 2, ಕೊಡಗು 10, ಕೋಲಾರ 1, ಕೊಪ್ಪಳ 0, ಮಂಡ್ಯ 4, ಮೈಸೂರು 16, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 5, ಉಡುಪಿ 6, ಉತ್ತರ ಕನ್ನಡ 7, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement