ಪುನೀತ್ ಓದಿಸುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದ ತಮಿಳು ನಟ ವಿಶಾಲ್…!:ವರದಿ

ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದು ತಮಿಳು ನಟ ವಿಶಾಲ್​ ಭಾನುವಾರ (ಅಕ್ಟೋಬರ್ 31) ಹೇಳಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರಿಂದ ಉಚಿತ ಶೈಕ್ಷಣಿಕ ನೆರವು ಪಡೆಯುತ್ತಿರುವ 1800 ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ನೋಡಿಕೊಳ್ಳುವುದಾಗಿ ತಮಿಳು ನಟ ವಿಶಾಲ್ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
. ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ಪುನೀತ್ ಓದಿಸುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ನನ್ನದು ಎಂದು ತಮಿಳು ನಟ ವಿಶಾಲ್‌ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.
ಪುನೀತ್ ರಾಜ್​ಕುಮಾರ್​ 1800 ಮಕ್ಕಳನ್ನು ಓದಿಸುತ್ತಿದ್ದರು. ಪುನೀತ್ ರಾಜ್​ಕುಮಾರ್ ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಕೂಡ ತೊಡಗಿಕೊಂಡಿದ್ದರು ಎಂಬ ವಿಚಾರ ಅವರ ನಿಧನಾನಂತರ ಹೆಚ್ಚು ಹೆಚ್ಚು ಬೆಳಕಿಗೆ ಬರುತ್ತಿದೆ. ಈ ಬಗ್ಗೆ ವಿವಿಧ ಅಭಿಮಾನದ ಮಾತುಗಳು, ಬೇಸರದ ನುಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಪುನೀತ್ ರಾಜ್‌ಕುಮಾರ್ ಅವರ ಹಠಾತ್ ನಿಧನವು ಅವರ ಲಕ್ಷಾಂತರ ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ ಆದರೆ ಅವರ ಚಾರಿಟಿ ಕಾರ್ಯಗಳ ಬಗ್ಗೆ ಅನಿಶ್ಚಿತತೆ ಇತ್ತು.ಪುನೀತ್ ರಾಜ್‌ಕುಮಾರ್ ಅವರು ಅನೇಕ ದಾನ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದಿದೆ. ಅವುಗಳಲ್ಲಿ ಸುಮಾರು 1800 ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧನಸಹಾಯ. ಪುನೀತ್ ಕನಸು ನನಸಾಗುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಈಗ ಅದನ್ನು ಮುಂದಕ್ಕೆ ಕೊಂಡೊಯ್ಯಲು ನಟ ವಿಶಾಲ್‌ ಮುಂದೆ ಬಂದಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement