ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ಆಸ್ಟ್ರೇಲಿಯಾ ಮಾನ್ಯತೆ

ನವದೆಹಲಿ: ಆಸ್ಟ್ರೇಲಿಯಾದ ಥೆರಪೆಟಿಕ್ ಗೂಡ್ಸ್ ಅಡ್ಮಿನಿಸ್ಟ್ರೇಷನ್ (ಟಿಜಿಎ) ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​ ಕೊವಿಡ್ 19 ವಿರುದ್ಧದ ಲಸಿಕೆಯನ್ನು ಅಂಗೀಕರಿಸಿದೆ.
ಈ ಲಸಿಕೆಯು ಆಸ್ಟ್ರೇಲಿಯಾದಲ್ಲಿ ರಿಜಿಸ್ಟರ್ ಆಗಿಲ್ಲ. ಆದರೆ ಗಣನೀಯ ಪ್ರಮಾಣದಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರು ಈ ಲಸಿಕೆಯನ್ನು ಹಾಕಿಸಿಕೊಂಡಿರುವುದನ್ನು ಗುರುತಿಸಿ ಆಸ್ಟ್ರೇಲಿಯಾ ನಿರ್ಧಾರ ಕೈಗೊಂಡಿದೆ.
ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಜೊತೆಗೆ ಚೀನಾದ BBIBP- CorV ಕೂಡ ಆಸ್ಟ್ರೇಲಿಯಾದ ಪಟ್ಟಿ ಸೇರಿಕೊಂಡಿದೆ. ಟಿಜಿಎಯು ಇತ್ತೀಚೆಗಿನ ವಾರದಲ್ಲಿ ಕಂಡುಕೊಂಡ ಮಾಹಿತಿಯಲ್ಲಿ ಈ ಲಸಿಕೆಗಳು ಕೊರೊನಾ ಹರಡುವಿಕೆಯನ್ನು ತಡೆಗಟ್ಟುತ್ತವೆ ಎಂದು ತಿಳಿಸಿದೆ.
ಜೊತೆಗೆ ಭಾರತದ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಹಾಗೂ ಕೊರೊನಾವ್ಯಾಕ್ ಮತ್ತು BBIBP- CorV ಲಸಿಕೆಗಳು ಆಸ್ಟ್ರೇಲಿಯಾದಲ್ಲಿ ಅನುಮೋದನೆ ಪಡೆದುಕೊಂಡಿದೆ. ಆಸ್ಟ್ರೇಲಿಯಾದಲ್ಲಿ ಏಷ್ಯಾದ ಈ ಉಭಯ ದೇಶಗಳ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು, ಕೆಲಸಗಾರರು ಬಹಳಷ್ಟು ಸಂಖ್ಯೆಯಲ್ಲಿದ್ದಾರೆ.
ಕೊವ್ಯಾಕ್ಸಿನ್ ಭಾರತದ ಮೊದಲ ಸ್ವದೇಶಿ ಕೊವಿಡ್ 19 ಲಸಿಕೆ ಆಗಿದೆ. ಇದನ್ನು ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದೆ. ಐಸಿಎಮ್​ಆರ್ ಮತ್ತು ಎನ್​ಐವಿ ಜೊತೆಗೂಡಿ ಈ ಲಸಿಕೆ ಸಿದ್ಧಪಡಿಸಿದೆ. ಮಾರಿಷಸ್, ಓಮನ್, ಫಿಲಿಫೈನ್ಸ್, ನೇಪಾಳ, ಮೆಕ್ಸಿಕೊ, ಇರಾನ್, ಶ್ರೀಲಂಕಾ, ಗ್ರೀಸ್, ಎಸ್ಟೋನಿಯಾ ಮತ್ತು ಜಿಂಬಾಬ್ವೆ ಈ ಲಸಿಕೆಗೆ ಅನುಮೋದನೆ ನೀಡಿವೆ.

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement