ಭಾರತದ ಕೋವಿಡ್ -19 ಸಕ್ರಿಯ ಪ್ರಕರಣ 248 ದಿನಗಳಲ್ಲೇ ಕಡಿಮೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 12,514 ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ ಸಂಖ್ಯೆಯನ್ನು 3,42,85,814 ಕ್ಕೆ ಒಯ್ದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಬೆಳಿಗ್ಗೆ ಬಿಡುಗಡೆ ಮಾಡಿದ ಡೇಟಾವನ್ನು ತೋರಿಸಿದೆ.
ಅಲ್ಲದೆ, ಕಳೆದ 24 ಗಂಟೆಗಳಲ್ಲಿ 251 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್ -19 ಕಾರಣದಿಂದಾಗಿ ದೇಶಾದ್ಯಂತ ಮೃತಪಟ್ಟವರ ಸಂಖ್ಯೆ 4,58,437 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 12,718 ರೋಗಿಗಳು ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳು ಈಗ 1,58,817 ರಷ್ಟಿದೆ– 248 ದಿನಗಳ ನಂತರ ಅತಿ ಕಡಿಮೆಯಾಗಿದೆ. ಇದುವರೆಗೆ 3,36,68,560 ಮಂದಿ ಕೊರೊನಾ ಸೋಂಕಿತರನ್ನು ಗುಣಪಡಿಸಿ ಬಿಡುಗಡೆ ಮಾಡಲಾಗಿದ್ದು, ಭಾರತವು ಒಟ್ಟು 1,06,31,24,205 ಡೋಸ್‌ಗಳ ಕೋವಿಡ್-19 ಲಸಿಕೆಯನ್ನು ನೀಡಿದೆ.

0 / 5. 0

ಪ್ರಮುಖ ಸುದ್ದಿ :-   ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಕ್ಷಿಣ ಭಾರತದ ಜನಪ್ರಿಯ ನಟರಾದ ಅದಿತಿ ರಾವ್ ಹೈದರಿ-ಸಿದ್ಧಾರ್ಥ

ನಿಮ್ಮ ಕಾಮೆಂಟ್ ಬರೆಯಿರಿ

advertisement