ವಿವಾದಿತ 3 ಕೃಷಿ ಕಾನೂನುಗಳನ್ನು ರದ್ದುಪಡಿಸಲು ಕೇಂದ್ರ ಸರ್ಕಾರಕ್ಕೆ ನ.26ರ ವರೆಗೆ ಗಡುವು ನೀಡಿದ ಟಿಕಾಯತ್‌

ಗಾಜಿಯಾಬಾದ್: ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಕಾನೂನುಗಳನ್ನು ನವೆಂಬರ್ 26ರೊಳಗೆ ಕೇಂದ್ರಸರ್ಕಾರ ರದ್ದು ಪಡಿಸಬೇಕು. ಇಲ್ಲವಾದರೆ ದೆಹಲಿಯ ಗಡಿ ಭಾಗದಲ್ಲಿ ರೈತರು ಹೋರಾಟವನ್ನು ತೀವ್ರಗೊಳಿಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್‍ನ ಮುಖ್ಯಸ್ಥ ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿರುವ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಅನುಕೂಲ) ಕಾಯ್ದೆ-2020, ರೈತರ ಬೆಲೆ ಒಪ್ಪಂದ ಮತ್ತು ಕೃಷಿ ಸೇವೆಗಳ (ಸಬಲೀಕರಣ ಮತ್ತು ರಕ್ಷಣಾ) ಕಾಯ್ದೆ, ಅಗತ್ಯ ಸೇವೆಗಳ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಳೆದ ವರ್ಷದ ನವೆಂಬರ್ 26ರಿಂದ ದೆಹಲಿಯ ಗಡಿ ಭಾಗದಲ್ಲಿ ರೈತರು ಆಂದೋಲನ ಆರಂಭಿಸಿದ್ದು, ಅದು ಮುಂದುವರಿದಿದೆ. ಈ ನವೆಂಬರ್ 26ಕ್ಕೆ ಹೋರಾಟಕ್ಕೆ ಒಂದು ವರ್ಷ ತುಂಬಲಿದೆ.
ನಿಗದಿತ ಗಡುವಿನಲ್ಲಿ ಕೇಂದ್ರ ಸರ್ಕಾರ ಕಾನೂನುಗಳನ್ನು ರದ್ದು ಪಡಿಸಬೇಕು. ಮಾಡದಿದ್ದರೆ ನವೆಂಬರ್ 27ರ ನಂತರ ಸಾವಿರಾಗು ರೈತರು ದೆಹಲಿ ಗಡಿ ತಲುಪಲಿದ್ದಾರೆ. ತಮ್ಮ ಟ್ಯಾಕ್ಟರ್‍ಗಳಲ್ಲಿ ದೆಹಲಿಯ ಸುತ್ತ ಬಲವಾದ ಕೋಟೆ ನಿರ್ಮಿಸಲಿದ್ದಾರೆ. ದೆಹಲಿ ಪ್ರವೇಶದ ಮೂರು ಭಾಗದಲ್ಲೂ ಟೆಂಟ್‍ಗಳನ್ನು ನಿರ್ಮಿಸಲಾಗುತ್ತದೆ ಎಂದು ರಾಕೇಶ್ ಟಿಕಾಯತ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
ವಿವಾದಿತ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಅಹೋರಾತ್ರಿ ಬಿಡುಬಿಟ್ಟು ಪಂಜಾಬ್, ಹರ್ಯಾಣ ಮತ್ತು ಉತ್ತರ ಪ್ರದೇಶಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಪ್ರತಿಭಟನೆಯನ್ನು ಹಿಂಪಡೆಯಲು ರೈತರ ನಿಯೋಗದ ಜೊತೆ ಹತ್ತಾರು ಬಾರಿ ಮಾತುಕತೆ ನಡೆಸಿದೆ ಆದರೆ ಅದು ಪ್ರಯೋಜನವಾಗಿಲ್ಲ. ಕಾಯ್ದೆ ವಿರೋಧಿಸಿ ಕೆಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯ ಸದ್ಯಕ್ಕೆ ಕಾಯ್ದೆಗಳ ಜಾರಿಗೆ ತಡೆಯಾಜ್ಞೆ ನೀಡಿದೆ. ಆದರೆ ರೈತರು ಕಳೆದ ಹನ್ನೊಂದು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement