ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ ನಾಲ್ಕು ದಿನ ಹಿಂಗಾರು ಮಳೆ ಜೋರು: ಯೆಲ್ಲೊ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ, ಮಲೆನಾಡಿನಲ್ಲಿ ಮಳೆ ಬೀಳುತ್ತಿದ್ದು, ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂದಿನಿಂದ ನವೆಂಬರ್ 5ರ ವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಹಿಂಗಾರು ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಇಂದು ಗುಡುಗು, ಸಿಡಿಲಿನಿಂದ ಕೂಡಿದ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಹೆಚ್ಚಾಗಲಿದೆ.
ಕರಾವಳಿ, ದಕ್ಷಿಣ ಒಳನಾಡು, ಮಲೆನಾಡಿನಲ್ಲಿ ನ. 3 ಮತ್ತು ನ. 5ರಂದು ಯೆಲ್ಲೊ ಅಲರ್ಟ್‌ ಹಾಗೂ ನ. 4ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ನ. 4ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ನವೆಂಬರ್‌ 4ರಂದು ಮಲೆನಾಡಿನ ಜಿಲ್ಲೆಗಳ ಜತೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಲ್ಲೂ ಹಳದಿ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಯಾದಗಿರಿ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ನ. 3ರಿಂದ ನ. 5ರವರೆಗೆ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಮಳೆ, ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ದ
ಇಂದು ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 3ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ರಾಯಲಸೀಮೆ, ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಹೆಚ್ಚಾಗಲಿದೆ. ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಗೋವಾ, ದಕ್ಷಿಣ ತೆಲಂಗಾಣ ಮತ್ತು ಲಕ್ಷದ್ವೀಪಗಳಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ.

ಪ್ರಮುಖ ಸುದ್ದಿ :-   ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement