ಪುನೀತ್‌ ರಾಜಕುಮಾರಗೆ ಪದ್ಮಶ್ರೀ : ಸಿಎಂ ಸಮ್ಮತಿ

posted in: ರಾಜ್ಯ | 0

ಮೈಸೂರು: ನಟ ಪುನೀತ್ ರಾಜ್‌ಕುಮಾರ್ ಪದ್ಮಶ್ರೀ ಸೇರಿದಂತೆ ಎಲ್ಲ ಗೌರವಕ್ಕೆ ಅರ್ಹರು. ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ನಿಯಮಗಳನ್ನು ಪರಿಶೀಲನೆ ಮಾಡಿದ ನಂತರ ಕೇಂದ್ರ ಸರ್ಕಾರದ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಎಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯಕ್ಕೆ ಅವರು ಬಾಗಿನ ಸಲ್ಲಿಸಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪುನೀತ್ ರಾಜಕುಮಾರ್ ಅವರು ಪ್ರಶಸ್ತಿಗೆ ಮೀರಿದ ವ್ಯಕ್ತಿತ್ವ. ಎಲ್ಲವನ್ನೂ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.

advertisement

ಬಾಗಿನ ಅರ್ಪಿಸುವ ಅಂಗಳಕ್ಕೆ ನುಗ್ಗಲು ಯತ್ನ:
ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸುವ ಅಂಗಳಕ್ಕೆ ಬಿಜೆಪಿಯ ಎಚ್.ಡಿ.ಕೋಟೆ ತಾಲ್ಲೂಕಿನ ಅಧ್ಯಕ್ಷ ಗುರುಸ್ವಾಮಿ ನುಗ್ಗಲು ಯತ್ನಿಸಿದರು.
ಈ ಸಂದರ್ಭ ಅವರನ್ನು ತಡೆದ ಪೊಲೀಸರು ಅತಿಥಿಗೃಹದಲ್ಲಿ ಭೇಟಿ ಮಾಡುವಂತೆ ಸೂಚಿಸಿದರು. ಹೀಗಾಗಿ, ಬಿಜೆಪಿ ಮುಖಂಡರಿಗೇ ಅವಕಾಶ ನೀಡಿಲ್ಲ ಎಂದು ಗುರುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಕರ್ನಾಟಕದಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement