ಕಾಬೂಲ್ ಸೇನಾ ಆಸ್ಪತ್ರೆ ಮೇಲಿನ ಎರಡು ಸ್ಫೋಟಗಳಲ್ಲಿ ಕನಿಷ್ಠ 19 ಸಾವು, 50 ಮಂದಿಗೆ ಗಾಯ

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿರುವ ಅಫ್ಘಾನ್​ನ ಅತಿ ದೊಡ್ಡ ಮಿಲಿಟರಿ ಆಸ್ಪತ್ರೆಯ ಬಳಿ ಎರಡು ಸ್ಫೋಟಗಳು ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಠ 19 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 50 ಮಂದಿ ಗಾಯಗೊಂಡಿದ್ದಾರೆ. ಬಾಂಬ್ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಇಂದು ಭಾರೀ ಸ್ಫೋಟ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ತಾಲಿಬಾನ್ ಸರ್ಕಾರದ ವಕ್ತಾರ ಖಾರಿ ಸಯೀದ್ ಖೋಸ್ಟಿ ನೀಡಿರುವ ಮಾಹಿತಿ ಪ್ರಕಾರ, ಅಫ್ಘಾನಿಸ್ತಾನದ ಅತಿ ದೊಡ್ಡ ಆಸ್ಪತ್ರೆಯಾದ 400 ಬೆಡ್​ಗಳ ವ್ಯವಸ್ಥೆಯಿರುವ ಸರ್ದಾರ್ ಮೊಹಮ್ಮದ್ ದೌದ್​ ಖಾನ್ ಆಸ್ಪತ್ರೆಯ ಪ್ರವೇಶದ್ವಾರದ ಬಳಿ ಒಂದು ಸ್ಫೋಟ ಸಂಭವಿಸಿದೆ. ಈ ಭಾಗದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಭಾರೀ ಸ್ಫೋಟದಿಂದ ಅಫ್ಘಾನ್ ಮಿಲಿಟರಿ ಆಸ್ಪತ್ರೆ ಸುತ್ತಲೂ ದಟ್ಟ ಹೊಗೆ ತುಂಬಿಕೊಂಡಿದೆ. ಈ ಸ್ಫೋಟಗಳ ಹೊಣೆಯನ್ನು ಯಾವುದೇ ಸಂಘಟನೆಗಳೂ ಹೊತ್ತುಕೊಂಡಿಲ್ಲ. ಈ ದಾಳಿಯ ಉದ್ದೇಶ ಮತ್ತು ಕೈವಾಡದ ಬಗ್ಗೆ ತನಿಖೆಯ ಬಳಿಕಷ್ಟೇ ತಿಳಿಯಲಿದೆ. ಈ ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿಯೂ ನಡೆದಿದೆ. ಎರಡನೇ ಸ್ಫೋಟವೂ ಇದೇ ಆಸ್ಪತ್ರೆಯ ಸಮೀಪ ಸಂಭವಿಸಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement