ಕೆಎಸ್‌ಇಟಿ ಪರೀಕ್ಷೆ ಫಲಿತಾಂಶ ಪ್ರಕಟ : ಸಹಾಯಕ ಪ್ರಾಧ್ಯಾಪಕರಾಗಲು ಅರ್ಹ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮೈಸೂರು: ಮೈಸೂರು ವಿದ್ಯಾಲಯದ 2021ರ ಜುಲೈ ತಿಂಗಳಲ್ಲಿ ನಡೆಸಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆ (ಕೆ-ಸೆಟ್)ಯಲ್ಲಿ 4779 (ಶೇ.6.84) ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರಾಗಲು ಅರ್ಹರಾಗಿದ್ದಾರೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠೀಯಲ್ಲಿ ಮಾತನಾಡಿದ ಅವರು, ‘ಯುಜಿಸಿ ಪರಿಶೀಲನಾ ಸಮಿತಿ ಸದಸ್ಯರು ಪರಿಶೀಲಿಸಿ ಫಲಿತಾಂಶ ಬಿಡುಗಡೆಗೆ ಅನುಮತಿ ನೀಡಿದ್ದು, ನ.2ರಂದು ಫಲಿತಾಂಶ ಪ್ರಕಟಿಸಲಾಗಿದೆ. 2019ರಲ್ಲಿ ಶೇ.6.96, 2020ರಲ್ಲಿ ಶೇ.6.89 ಫಲಿತಾಂಶ ಪಡೆದಿದ್ದ ಮೈಸೂರು ವಿವಿ ಈ ಬಾರಿ ಶೇ.6.84 ಫಲಿತಾಂಶ ಪಡೆದುಕೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಲು ಸಹಾಯಕವಾಗುವಂತೆ ಶೀಘ್ರವಾಗಿ ಫಲಿತಾಂಶ ಪ್ರಕಟಿಸಲಾಗಿದೆ ಎಂದರು.
ರಾಜ್ಯದ 11 ನೋಡಲ್ ಕೇಂದ್ರಗಳಲ್ಲಿ 41 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಯಲ್ಲಿ ರಾಜ್ಯದ ವಿವಿಧೆಡೆಯಿಂದ 83,907 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 69,857 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 2,490 ಪುರುಷ ಅಭ್ಯರ್ಥಿಗಳು ಹಾಗೂ 2,309 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 4779 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಅ ಮೈಸೂರು ಕೇಂದ್ರದಲ್ಲಿ ಪರೀಕ್ಷೆ ಪಡೆದ ವಿದ್ಯಾರ್ಥಿಗಳಲ್ಲಿ ಹೆಚ್ಚು ಅಂದರೆ 1059, ಬೆಂಗಳೂರು ಕೇಂದ್ರದಲ್ಲಿ 985, ಧಾರವಾಡ 559 ವಿದ್ಯಾರ್ಥಿಗಳು, ಬೆಳಗಾವಿ 145, ಬಳ್ಳಾರಿ 299, ವಿಜಯಪುರ 233, ದಾವಣಗೆರೆ 282, ಕಲಬುರ್ಗಿ 361, ಮಂಗಳೂರಿನಲ್ಲಿ 362, ಶಿವಮೊಗ್ಗದಲ್ಲಿ 264 ಹಾಗೂ ತುಮಕೂರಿನಲ್ಲಿ 230 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement