ವರ್ಕ್ ಫ್ರಮ್ ಹೋಮ್ ಪದ್ಧತಿಗೆ ಮಾನ್ಯತೆ ನೀಡುವಂತೆ ಕೇಂದ್ರ ಸಚಿವರಲ್ಲಿ ಮನವಿ: ಸಚಿವ ಅಶ್ವತ್ಥ ನಾರಾಯಣ ಮಾಹಿತಿ

ನವದೆಹಲಿ: ಪ್ರಸ್ತುತ ವರ್ಕ್ ಫ್ರಮ್ ಹೋಮ್ ಪದ್ಧತಿ ಹೆಚ್ಚಾಗಿದೆ. ಹೀಗಾಗಿ ವರ್ಕ್ ಫ್ರಮ್​ ಹೋಮ್​ಗೆ ಮಾನ್ಯತೆ ನೀಡುವಂತೆ ಕೇಂದ್ರ ಸಚಿವರ ಭೇಟಿ ವೇಳೆ ಮನವಿ ಮಾಡಿದ್ದೇನೆ ಎಂದು ದೆಹಲಿಯಲ್ಲಿ ಐಟಿ-ಬಿಟಿ ಸಚಿವ ಅಶ್ವತ್ಥ್ ನಾರಾಯಣ ಇಂದು (ಮಂಗಳವಾರ) ಹೇಳಿದ್ದಾರೆ.
ಕೇಂದ್ರದ ಐಟಿ ಸಚಿವರು 24ನೇ ಟೆಕ್ ಸಮ್ಮಿಟ್​ನಲ್ಲಿದ್ದಾರೆ. ಐಟಿ ಇಲಾಖೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಮಾತುಕತೆ ನಡೆಸಲಾಗುತ್ತಿದೆ. ಪಿಪಿಪಿ ಮಾಡೆಲ್​ನಲ್ಲಿ ಹಲವು ಯೋಜನೆ ತರಲು ಚಿಂತನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸ್ಟಾರ್ಟ್​ಅಪ್​ಗಳಿಗೆ ಸಾಲ ನೀಡುವ ಬಗ್ಗೆ ಹೊಸ ಯೋಜನೆ ಬಗ್ಗೆ ವಿಚಾರ ಮಾಡಲಾಗಿದೆ. ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಲಾಗಿದೆ. ಆರಂಭದಲ್ಲಿ ಬಂಡವಾಳ ಹೂಡಿಕೆಗೆ ಸರ್ಕಾರದಿಂದ ನೆರವು ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ನೂತನ ಶಿಕ್ಷಣ ನೀತಿ ಬಗ್ಗೆ ಕೇಂದ್ರ ಶಿಕ್ಷಣ ಸಚಿವರ ಜತೆಗೆ ಚರ್ಚಿಸಿದ್ದೇನೆ. ರಾಜ್ಯಕ್ಕೆ ಬಂದು ಉನ್ನತ ಮಟ್ಟದ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ. ಜ್ಞಾನದ ಜತೆಗೆ ಉದ್ಯಮಶೀಲತೆ ಹೆಚ್ಚಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಮಾಡಿದೆ. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಜತೆ ಚರ್ಚಿಸಿದ ಬಳಿಕ ನಿರ್ಧಾರ ಮಾಡಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಇತಿಹಾಸ ತಿರುಚುವ ಪ್ರಯತ್ನವಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement