ಹಾನಗಲ್​ ಉಪಚುನಾವಣೆ: ಸಿಎಂ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆಗೆ ಗೆಲುವು

ಹಾವೇರಿ: ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಆಡಳಿತಾರೂಢ ಬಿಜೆಪಿ ಮುಗ್ಗರಿಸಿದೆ. ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಜಯಗಳಿಸಿದೆ.  ಇದರಿಂದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹಿನ್ನಡೆಯಾಗಿದೆ.
14ನೇ ಸುತ್ತಿನ ಮುಕ್ತಾಯಕ್ಕೆ ಮುಕ್ತಾಯಕ್ಕೆ 46 ವರ್ಷದ  ಕಾಂಗ್ರೆಸ್ ಅಭ್ಯರ್ಥಿ ಮಾನೆಗೆ 87,490 ಮತಗಳು ಲಭಿಸಿವೆ. ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ 80,117 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್​ ಅಭ್ಯರ್ಥಿ ನಿಯಾಜ್ ಶೇಖ್​ಗೆ ಕೇವಲ 927 ಮತಗಳು ಸಿಕ್ಕಿವೆ. ನೋಟಾಗೆ 529 ಮತಗಳ ಚಲಾವಣೆ ಆಗಿದೆ.
ಕಾಂಗ್ರೆಸ್‌ 7063 ಮತಗಳ ಮುನ್ನಡೆಯನ್ನು ಪಡೆದಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್‌ಗೆ ಮುನ್ನಡೆ ಸಿಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಕಾರ್ಯಕರ್ತರು ತೆರಳಿದ್ದರು.
ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ ಮಾನೆ, ಹಾನಗಲ್‌ನಲ್ಲಿ ಜನಬಲ ಗೆದ್ದಿದೆ. ಹಣ ಬಲ ಸೋತಿದೆ. ಮತ ಹಾಕಿದ ಜನರಿಗೆ ಸಾಷ್ಟಾಂಗ ನಮಸ್ಕಾರ ಮಾಡುವೆ. ನಮ್ಮ ನಾಯಕರ ಪರಿಶ್ರಮ ಹಾಕಿದ್ದಾರೆ. ಸರ್ಕಾರದ ತಂತ್ರ ಮಣಿಸಿದ್ದಾರೆ. ಜನರು ಸರ್ಕಾರದ ದುರಾಡಳಿತವನ್ನು ತಿರಸ್ಕಾರ ಮಾಡಿದ್ದಾರೆ. ಆಡಳಿಯ ಯಂತ್ರ ಸಂಪೂರ್ಣ ಹದಗೆಟ್ಟಿದೆ. ಇನ್ನಾದರೂ ಜನರ ಕಲ್ಯಾಣ ಮಾಡಲಿ ಎಂದು ವಾಗ್ದಾಳಿ ನಡೆಸಿದರು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement