ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಾನಮತ್ತ ವ್ಯಕ್ತಿಯಿಂದ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆಗೆ ಯತ್ನ..! ವೀಕ್ಷಿಸಿ

ಬೆಂಗಳೂರು: ಬೆಂಗಳೂರಿನಲ್ಲಿ ಖ್ಯಾತ ತಮಿಳುನಟ ವಿಜಯ್ ಸೇತುಪತಿ ಮೇಲೆ ಹಲ್ಲೆ ಯತ್ನ ನಡೆದಿದೆ ಎಂದು ವರದಿಗಳು ತಿಳಿಸಿವೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನಟ ಮತ್ತು ಅವರ ಆಪ್ತರೊಂದಿಗೆ ನಿಲ್ದಾಣದ ಆವರಣದಲ್ಲೇ ಜಗಳ ಮಾಡಿಕೊಂಡಿದ್ದು, . ವಾಗ್ವಾದದ ನಂತರ ಪಾನಮತ್ತ ವ್ಯಕ್ತಿ … Continued

ವಾಯುಪಡೆ 6 ಸಿಬ್ಬಂದಿ ಸೇರಿ ಕಾನ್ಪುರದಲ್ಲಿ 25ಕ್ಕೂ ಹೆಚ್ಚು ಜನರಿಗೆ ಝಿಕಾ ವೈರಸ್ ಸೋಂಕು

ಕಾನ್ಪುರ: ವಾಯುಪಡೆಯ ಆರು ಸಿಬ್ಬಂದಿಯೂ ಸೇರಿದಂತೆ ಜಿಲ್ಲೆಯ 25 ಜನರಲ್ಲಿ ಬುಧವಾರ ಝಿಕಾ ವೈರಸ್ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಹೊಸ ಪ್ರಕರಣಗಳಲ್ಲಿ 14 ಮಹಿಳೆಯರು, ಆರು ವಾಯುಪಡೆಯ ಸಿಬ್ಬಂದಿ ಇದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ವಿಶಾಖ್ ತಿಳಿಸಿದ್ದಾರೆ. ಆರೋಗ್ಯ ಇಲಾಖೆ 586 ಜನರಿಂದ ಭಾನುವಾರ ರಕ್ತದ ಮಾದರಿಗಳನ್ನು ಸಂಗ್ರಹಿಸಿ … Continued

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದ ಅನುಭವವಾಗಿದೆ. ತಿಕೋಟಾ ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ನಡುಗಿದ ಅನುಭವ ಉಂಟಾಗಿದೆ. ಇಂದು (ಬುಧವಾರ) ರಾತ್ರಿ 30ಕ್ಕೆ ಭೂಮಿಯ ಆಳದಿಂದ ಭಾರೀ ಶಬ್ದ ಕೇಳಿ ಬಂದಿದೆ. ಶಬ್ದ ಕೇಳಿ ಆತಂಕಗೊಂಡ ಜನರು ಭಯದಿಂದ ಹೊರಗೋಡಿ ಬಂದಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದ … Continued

ಟೀಮ್ ಇಂಡಿಯಾ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ

ಟೀಮ್ ಇಂಡಿಯಾದ ನೂತನ ಕೋಚ್ ಆಗಿ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ (Rahul Dravid) ನೇಮಕಗೊಂಡಿದ್ದಾರೆ. ಬುಧವಾರ ನಡೆದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸಭೆಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅವರು ನ್ಯೂಜಿಲೆಂಡ್ ವಿರುದ್ಧ ಸರಣಿಯೊಂದಿಗೆ ದ್ರಾವಿಡ್ ಟೀಮ್ ಇಂಡಿಯಾ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಈ … Continued

ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ‘ಗೋಪೂಜೆ’ ನಡೆಸಲು ಅಧಿಕಾರಿಗಳ ನಿಯೋಜನೆ

ಬೆಂಗಳೂರು: ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆಯ ದೇಗಲುಗಳಲ್ಲಿ ಗೋಪೂಜೆ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯಾ ಜಿಲ್ಲೆಗಳಲ್ಲಿ ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. … Continued

ದೀಪಾವಳಿಗೆ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ: ನಾಳೆಯಿಂದ ಪ್ರತಿ ಲೀಟರ್‌ ಪೆಟ್ರೋಲಿಗೆ 5 ರೂ., ಡೀಸೆಲ್‌ಗೆ 10 ರೂ. ಕಡಿಮೆ

ನವದೆಹಲಿ : ಪೆಟ್ರೋಲ್‌ ಹಾಗೂ ಡಿಸೇಲ್‌ ದರ ಇಳಿಕೆಗೆ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ನಾಳೆಯಿಂದ (November 4) ಜಾರಿಗೆ ಬರುವಂತೆ ಪ್ರತಿ ಲೀಟರ್‌ ಪೆಟ್ರೋಲಿಗೆ 5 ರೂ. ಮತ್ತು ಡೀಸೆಲ್‌ಗೆ 10 ರೂ. ಕಡಿತಗೊಳಿಸಲಾಗುವುದು ಎಂದು ದೀಪಾವಳಿಯ ಮುನ್ನಾದಿನ ಕೇಂದ್ರ ಸರ್ಕಾರ ಘೋಷಿಸಿದೆ. ಇಂಧನ ಬೆಲೆ ಏರಿಕೆಯ ಪರಿಣಾಮದಿಂದ ತತ್ತರಿಸಿರುವ ಜನರಿಗೆ ಪರಿಹಾರದ … Continued

ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಫಲಾನುಭವಿ ಗುರುತಿಸಲು ಆಧಾರ್ ಒಂದೇ ಮಾನದಂಡವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಫಲಾನುಭವಿಗಳನ್ನು ಗುರುತಿಸಲು ಆಧಾರ್ ಒಂದು ಮಾನದಂಡವಾಗಿದ್ದು ಆದರೆ ಅದುವೇ ಏಕೈಕ ಮಾನದಂಡವಲ್ಲ ಎಂದು ಬಾಂಬೆ ಹೈಕೋರ್ಟ್‌ ಕಳೆದ ವಾರ ತಿಳಿಸಿದೆ (ಗಣಪತ್ ಧರ್ಮ ಮೆಂಗಲ್ ಮತ್ತಿತರರು ಹಾಗೂ ತಹಸೀಲ್ದಾರ್ ಕಚೇರಿ, ಮುರ್ಬಾದ್ ಮತ್ತಿತರರ ನಡುವಣ ಪ್ರಕರಣ). ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ಪ್ರಯೋಜನಗಳನ್ನು … Continued

ಶಿರಸಿ ಹೂಡ್ಲಮನೆ ಅನಂತ್‌ ಹೆಗಡೆ ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ

ಬೆಂಗಳೂರು: ಮೂವರು ವಕೀಲರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ. ವಕೀಲರಾದ ಅನಂತ್‌ ರಾಮನಾಥ್‌ ಹೆಗಡೆ, ಸಿದ್ದಯ್ಯ ರಾಚಯ್ಯ ಮತ್ತು ಕಣ್ಣನ್‌ಕುಳೈಲ್ ಶ್ರೀಧರನ್‌ ಹೇಮಲೇಖಾ ಅವರನ್ನು ಎರಡು ವರ್ಷಗಳವರೆಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ ಕೊಲಿಜಿಯಂ ಅಕ್ಟೋಬರ್‌ 6ರಂದು ಮೂವರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಕೇಂದ್ರ … Continued

ಐದು ರಾಜ್ಯಗಳ ಚುನಾವಣೆ ಹಿನ್ನೆಲೆ: ನವೆಂಬರ್‌ 7ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ನವದೆಹಲಿ: ಮುಂದಿನ ವರ್ಷ ಐದು ರಾಜ್ಯಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ನವೆಂಬರ್ 7 ರಂದು ನಡೆಸಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಭಾರತದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವು … Continued

ಭಾರತಕ್ಕೆ ದಿವಾಳಿ ಬಂಪರ್‌… ಸ್ವದೇಶಿ ನಿರ್ಮಿತ ಕೋವಿಡ್‌ ಲಸಿಕೆ ಕೊವ್ಯಾಕ್ಸಿನ್‌ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ

ಭಾರತಕ್ಕೆ ದಿವಾಳಿ ಬಂಪರ್‌… ಸ್ವದೇಶಿ ಕೋವಿಡ್‌ ಲಸಿಕೆ ಕೊವ್ಯಾಕ್ಸಿನ್‌ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನವದೆಹಲಿ: ಕೊರೊನಾ ವೈರಸ್ ವಿರುದ್ಧದ ಭಾರತದ ಕೊವ್ಯಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಸಮಿತಿಯು ಕಳೆದ ವಾರ ಹೈದರಾಬಾದ್ ಮೂಲದ ಸಂಸ್ಥೆಯಿಂದ ಹೆಚ್ಚುವರಿ ಸ್ಪಷ್ಟೀಕರಣಗಳನ್ನು ಕೇಳಿತ್ತು. … Continued