ಐದು ರಾಜ್ಯಗಳ ಚುನಾವಣೆ ಹಿನ್ನೆಲೆ: ನವೆಂಬರ್‌ 7ರಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ನವದೆಹಲಿ: ಮುಂದಿನ ವರ್ಷ ಐದು ರಾಜ್ಯಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ನವೆಂಬರ್ 7 ರಂದು ನಡೆಸಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ಭಾರತದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗವು ಪ್ರಾರಂಭವಾದ ನಂತರ ಇದು ಬಿಜೆಪಿಯ ಮೊದಲ ಭೌತಿಕ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಾಗಿದೆ.
ಸಭೆಯು ಹೈಬ್ರಿಡ್ ರೀತಿಯಲ್ಲಿ ನಡೆಯುತ್ತದೆ, ಇದರಲ್ಲಿ ಕೆಲವು ನಾಯಕರು ಭೌತಿಕವಾಗಿ ಹಾಜರಿರುತ್ತಾರೆ ಮತ್ತು ಇತರರು ವರ್ಚುವಲ್‌ನಲ್ಲಿ ಸೇರುತ್ತಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮುಂತಾದ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಪದಾಧಿಕಾರಿಗಳು, ರಾಜ್ಯ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳು ಸೇರಿದಂತೆ ಪಕ್ಷದ ಸಂಸದೀಯ ಮಂಡಳಿಯ ಎಲ್ಲಾ ಸದಸ್ಯರು ಭಾಗವಹಿಸಲಿದ್ದಾರೆ.
ಸಭೆಯ ಬಗ್ಗೆ ಎನ್‌ಇಸಿ ಸದಸ್ಯರಿಗೆ ಪತ್ರದಲ್ಲಿ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು, ಬಿಜೆಪಿಯ ಎನ್‌ಇಸಿ ಸಭೆಯನ್ನು ನ.7 ರಂದು ಬೆಳಿಗ್ಗೆ 10 ಗಂಟೆಗೆ ದೆಹಲಿಯಲ್ಲಿ ನಿಗದಿಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಮುಕ್ತಾಯವಾಗಲಿದೆ. ದಿಲ್ಲಿಯ ಎನ್‌ಡಿಎಂಸಿ ಕನ್ವೆಂಷನ್ ಸೆಂಟರ್‌ನಲ್ಲಿ ಸಭೆ ನಡೆಯಲಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಷಣದೊಂದಿಗೆ ಪ್ರಾರಂಭವಾಗುತ್ತದೆ. ಪ್ರಧಾನಿ ಮೋದಿಯವರು ಭಾಷಣವನ್ನು ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ವಿಧಾನಸಭೆ ಮತ್ತು ಲೋಕಸಭೆ ಉಪ ಚುನಾವಣೆಗಳಲ್ಲಿ ಕೆಲವೆಡೆ ಪಕ್ಷಕ್ಕೆ ಆದ ಹಿನ್ನಡೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಕೋಲ್ಕತ್ತಾ ವಶಪಡಿಸಿಕೊಳ್ಳಲು ಆತ್ಮಹತ್ಯಾ ಬಾಂಬರ್‌ಗಳನ್ನು ಕಳುಹಿಸ್ತೇನೆ ': ಬಾಂಗ್ಲಾದೇಶ ಮೂಲಭೂತವಾದಿಯಿಂದ ಹಿಂದೂಗಳ ವಿರುದ್ಧ ಬೆದರಿಕೆ ವೀಡಿಯೊ ವೈರಲ್‌

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement