ಕುಮಟಾ: ಅಕ್ರಮವಾಗಿ ಸಾಗಿಸುತ್ತಿದ್ದ 22 ಎಮ್ಮೆ-ಕೋಣಗಳ ರಕ್ಷಣೆ; ನಾಲ್ವರು ವಶಕ್ಕೆ

ಕುಮಟಾ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಳೆಗದ್ದೆ ಬಳಿ ನಡೆದ ಬಗ್ಗೆ ವರದಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಹೊಳೆಗದ್ದೆ ಟೋಲ್‌ಗೇಟ್ ಬಳಿ ಪೊಲೀಸರ ತಪಾಸಣೆ ಮಾಡಿದ್ದಾರೆ. ಅದನ್ನು ಹಿಂಸಾತ್ಮಕವಾಗಿ ಕೊಂಡೊಯ್ಯುತ್ತಿರುವುದಕ್ಕೆ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಜಾನುವಾರುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವುದು ಬೆಳಕಿಗೆ ಬಂದಿದೆ. ೊಟ್ಟು 13 ಕೋಣ, 9 ಎಮ್ಮೆಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ. ಎಮ್ಮೆ ಹಾಗೂ ಕೋಣವನ್ನು ಕುಮಟಾ ತಾಲೂಕಿನ ಹೊಸಾಡ ಗೋಶಾಲೆಗೆ ಕಳುಹಿಸಲಾಗಿದೆ ಎನ್ನಲಾಗಿದೆ.

0 / 5. 0

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement