ದೀಪಾವಳಿ ಮುಗಿದ ತಕ್ಷಣ ಭತ್ತ ಖರೀದಿ ಪ್ರಕ್ರಿಯೆ ಆರಂಭಕ್ಕೆ ತೀರ್ಮಾನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ/ಬೆಂಗಳೂರು: ಭತ್ತ ಖರೀದಿ ಕೇಂದ್ರ ಆರಂಭಿಸಿ ಎಂಬ ಬೇಡಿಕೆ ಇತ್ತು. ಅದರಲ್ಲೂ ಭತ್ತ ಹೆಚ್ಚಾಗಿ ಬೆಳೆಯುವ ರಾಯಚೂರು, ಕೊಪ್ಪಳ ಭಾಗ ಸೇರಿದಂತೆ ರಾಜ್ಯದ ರೈತರು ಈ ಬಗ್ಗೆ ಪದೇ ಪದೇ ಮನವಿ ಮಾಡಿದ್ದರು. ಹೀಗಾಗಿಎಂಎಸ್.ಪಿ ದರಲ್ಲಿ ಭಕ್ತ ಖರೀದಿಸಲು ಸರ್ಕಾರದ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಐಇ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಲು ತಿಳಿಸಲಾಗಿದೆ. ದೀಪಾವಳಿ ಮುಗಿದ ತಕ್ಷಣ ಭತ್ತ ಖರೀದಿ ಆರಂಭವಾಗುತ್ತದೆ. ಭತ್ತ ಖರೀದಿ ನೇರವಾಗಿ ಸರ್ಕಾರವೆ ಮಾಡಲಿದೆ. ಜತೆಗೆ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಸಂಪುಟ ಉಪ ಸಮಿತಿಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆಯ ಫಲಿತಾಂಶಗಳು ಸರ್ಕಾರದ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ. ಈ ಫಲಿತಾಂಶ ಮುಂದಿನ ಚುನಾವಣೆಗಳ ದಿಕ್ಸೂಚಿಯೂ ಅಲ್ಲ. ಉಪ ಚುನಾವಣೆಯ ಫಲಿತಾಂಶಗಳು ಮುಂದಿನ ಚುನಾವಣೆಯ ದಿಕ್ಸೂಚಿ ಎಂದು ವಿರೋಧ ಪಕ್ಷಗಳು ಹೇಳುವುದು ಸಹಜ. ಹಾಗಾದರೆ ಸಿಂದಗಿ ಫಲಿತಾಂಶ ಯಾವುದರ ದಿಕ್ಸೂಚಿ ಎಂದು ಅವರು ಪ್ರಶ್ನಿಸಿದರು.
ಸಿಂದಗಿಯಲ್ಲಿ ೩೧ ಸಾವಿರ ಭಾರಿ ಮತಗಳ ಅಂತರದಿಂದ ಕಾಂಗ್ರೆಸ್ ಸೋತಿದೆ. ಅದನ್ನು ಕಾಂಗ್ರೆಸ್‌ನವರು ಮೊದಲು ನೋಡಿಕೊಳ್ಳಲಿ. ಹಾಗಾದರೆ ದಿಕ್ಸೂಚಿ ಸಿಂದಗಿಯಿಂದಲೇ ಆರಂಭವಾಗಬೇಕು ಎಂದರು.
ಉಪ ಚುನಾವಣೆಯ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ದೃಷ್ಟಿಕೋನ ತಮ್ಮದು. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಸೋಲನುಭವಿಸಿತ್ತು ಎಂದು ಹೇಳಿದರು.

ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement