ನ.8ರಿಂದ ರಾಜ್ಯಾದ್ಯಂತ’ಅಂಗನವಾಡಿ ಕೇಂದ್ರ’ ಆರಂಭಕ್ಕೆ ಹಸಿರು ನಿಶಾನೆ, ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ಭೀತಿಯ ನಡುವೆಯೂ ರಾಜ್ಯಾದ್ಯಂತ 1 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದೆ. ಈಗ ನವೆಂಬರ್ ೮ರಿಂದ ಅಂಗನವಾಡಿ ಕೇಂದ್ರಗಳನ್ನು ಪುನರ್ ಪ್ರಾರಂಭಿಸಲು ರಾಜ್ಯ ಸರ್ಕಾರದ ಹಸಿರು ನಿಶಾನೆ ದೊರೆತಿದೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಶೇ.೨ಕ್ಕಿಂತ ಕಡಿಮೆ ಟಿಪಿಆರ್ ಇರುವ ತಾಲ್ಲೂಕುಗಳಲ್ಲಿ ಕೋವಿಡ್-೧೯ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸಿ ಹಾಗೂ ಲಸಿಕೆ ಪಡೆದಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಮೂಲಕ ಸೇವೆಗಳನ್ನು ಒದಗಿಸಲು ೨ ಗಂಟೆಗಳ ಕಾಲ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲು ಅವರು ಸೂಚಿಸಿದ್ದಾರೆ.
ಸೆಪ್ಟೆಂಬರ್ ನಾಲ್ಕರಂದೇ ರಾಜ್ಯ ಕೋವಿಡ್-೧೯ ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಪುನರ್ ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಪುನರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕೋವಿಡ್-೧೯ ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತಿತ್ತು.

ಸರ್ಕಾರದ ಮಾರ್ಗಸೂಚಿಗಳು

* ಕೋವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾಂಭಿಸುವುದು
* ಅಂಗವಾಡಿ ಕೇಂದ್ರಗಳ ಫಲಾನುಭವಿಗಳ ಎಲ್ಲಾ ಪೋಷಕರು 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು
* ಅಂಗನವಾಡಿ ಕೇಂದ್ರಗಳಿಗೆ ಹಾಜರಾಗಲು ಇಚ್ಛಿಸುವ ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಅಂಗನವಾಡಿ ಕಾರ್ಯಕರ್ತೆಯು ಪಡೆಯುವುದು
* ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯುವುದು
* ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಎರಡು ಡೋಸ್ ಲಸಿಕೆ ಪಡೆದಿರಬೇಕು
* ಪಾಕೋಪಕರಣ, ಜಮಖಾನ, ಡೆಸ್ಕ್, ಕುರ್ಚಿ, ಆಟಿಕೆ ಸಮಾನುಗಳನ್ನು ಅಂಗನವಾಡಿ ಪ್ರಾರಂಭದ ಹಿಂದಿನ ದಿನ ಸ್ವಚ್ಛಗೊಳಿಸುವುದು.
* ಶೌಚಾಲಯ, ಅಂಗನವಾಡಿಯ ನೆಲ, ಗೋಡೆ, ಕಿಟಕಿ, ಬಾಗಿಲು ಮುಂತಾದವುಗಳನ್ನು ಸೋಪಿನ ದ್ರಾವಣದಲ್ಲಿ ಸ್ವಚ್ಚಗೊಳಿಸುವುದು
* ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಗ್ರಾಮ ಪಂಚಾಯ್ತಿ ಮತ್ತು ಬಾಲವಿಕಾಸ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡುವುದು

ನಿಮ್ಮ ಕಾಮೆಂಟ್ ಬರೆಯಿರಿ

advertisement