ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ‘ಗೋಪೂಜೆ’ ನಡೆಸಲು ಅಧಿಕಾರಿಗಳ ನಿಯೋಜನೆ

ಬೆಂಗಳೂರು: ದೀಪಾವಳಿ ಬಲಿಪಾಡ್ಯಮಿ ದಿನದಂದು ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯ ದೇಗಲುಗಳಲ್ಲಿ ಗೋಪೂಜೆ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಆಯಾ ಜಿಲ್ಲೆಗಳಲ್ಲಿ ಪೂಜೆಯ ದಿನ ಹಸುಗಳನ್ನು ದೇಗುಲಗಳಿಗೆ ಕರೆತರುವ ಹಾಗೂ ಗೋಪೂಜೆ ನೆರವೇರಿಸುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಲಿಪಾಡ್ಯಮಿ ದಿನ ಸಂಜೆ 5:30 ರಿಂದ 6:30ರ ಸಮುದಲ್ಲಿ ಪೂಜೆ ನಡೆಸಲು ಸೂಚನೆ ನೀಡಲಾಗಿದ್ದು, ಈ ಸಮಯದಲ್ಲಿ ದೇವಾಲಯಗಳಲ್ಲಿ ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯದಲ್ಲಿ ಅರಿಶಿಣ, ಕುಂಕುಮ, ಹೂವುಗಳಿಂದ ಪೂಜಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸಿಗಳನ್ನು ಹಸುಗಳಿಗೆ ನೀಡಿ ಆರಾಧಿಸಲು ಸೂಚನೆ ನೀಡಲಾಗಿದೆ.. ನವೆಂಬರ್ 5ರ ಬಲಿಪಾಡ್ಯಮಿಯಂದು ಪೂಜೆ ಸಲ್ಲಿಸಲು ಆದೇಶ ನೀಡಲಾಗಿದೆ.

 

0 / 5. 0

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ನಿಮ್ಮ ಕಾಮೆಂಟ್ ಬರೆಯಿರಿ

advertisement