ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದ ಅನುಭವವಾಗಿದೆ.
ತಿಕೋಟಾ ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ನಡುಗಿದ ಅನುಭವ ಉಂಟಾಗಿದೆ. ಇಂದು (ಬುಧವಾರ) ರಾತ್ರಿ 30ಕ್ಕೆ ಭೂಮಿಯ ಆಳದಿಂದ ಭಾರೀ ಶಬ್ದ ಕೇಳಿ ಬಂದಿದೆ. ಶಬ್ದ ಕೇಳಿ ಆತಂಕಗೊಂಡ ಜನರು ಭಯದಿಂದ ಹೊರಗೋಡಿ ಬಂದಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದ ಅನುಭವ ಉಂಟಾಗಿದೆ.
ಅಕ್ಟೋಬರ್ 1, 2, 3, 7ರಂದು ಕ್ರಮವಾಗಿ ವಿಜಯಪುರದ ತಿಕೋಟ, ಬಸವನಬಾಗೇವಾಡಿ ಮುಂತಾದ ಕಡೆಗಳಲ್ಲಿ ಭೂಕಂಪನವಾಗಿತ್ತು. ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ ದಾಖಲಾಗಿತ್ತು. ವಿಜಯಪುರ ಮಾತ್ರವಲ್ಲದೆ ಅಕ್ಟೋಬರ್ ಮೊದಲ ವಾರ ಸಿಂಧಗಿ, ಬೀದರ್, ಕಲಬುರ್ಗಿಯಲ್ಲೂ ಭೂಕಂಪನದ ಅನುಭವವಾಗಿತ್ತು.
ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗಡಿಕೇಶ್ವರ, ಹೊಸಳ್ಳಿ ಎಚ್, ತೇಗಲತಿಪ್ಪಿ, ಕೆರೂರು ಸೇರಿದಂತೆ ಹತ್ತಕ್ಕೂ ಹಳ್ಳಿಗಳಲ್ಲಿ ಲಘು ಭೂಕಂಪನಗಳು ಮೇಲಿಂದ ಮೇಲೆ ಆಗುತ್ತಿವೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement