ಶಿರಸಿ ಹೂಡ್ಲಮನೆ ಅನಂತ್‌ ಹೆಗಡೆ ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕ

ಬೆಂಗಳೂರು: ಮೂವರು ವಕೀಲರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.
ವಕೀಲರಾದ ಅನಂತ್‌ ರಾಮನಾಥ್‌ ಹೆಗಡೆ, ಸಿದ್ದಯ್ಯ ರಾಚಯ್ಯ ಮತ್ತು ಕಣ್ಣನ್‌ಕುಳೈಲ್ ಶ್ರೀಧರನ್‌ ಹೇಮಲೇಖಾ ಅವರನ್ನು ಎರಡು ವರ್ಷಗಳವರೆಗೆ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.
ಸುಪ್ರೀಂ ಕೋರ್ಟ್‌ ಕೊಲಿಜಿಯಂ ಅಕ್ಟೋಬರ್‌ 6ರಂದು ಮೂವರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.
ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 43 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.
ಅನಂತ್ ರಾಮನಾಥ್ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಹೂಡ್ಲಮನೆಯವರು. ಹೂಡ್ಲಮನೆ ಕುಟುಂಬದ 3 ನೇ ತಲೆಮಾರಿನ ವಕೀಲರಾದ ಅನಂತ್ ರಾಮನಾಥ್ ಹೆಗಡೆ ಶಿರಸಿಯಲ್ಲಿ   ಹಾಗೂ ಹೈಕೋರ್ಟ್‌ನಲ್ಲಿ ವಕೀಲರಾಗಿ ಕಾರ್ಯನಿರ್ವಹಿಸಿದ್ದಾರೆ.

3.8 / 5. 5

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ನಿಮ್ಮ ಕಾಮೆಂಟ್ ಬರೆಯಿರಿ

advertisement