ಚಿತ್ರದುರ್ಗ: ಖ್ಯಾತ ಚಿತ್ರನಟ ಪುನೀತ್ ರಾಜ್ಕುಮಾರ್ ಅವರನ್ನು ಮರಣೋತ್ತರವಾಗಿ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಗೆ ಮುರುಘಾ ಮಠ ಆಯ್ಕೆ ಮಾಡಿದೆ. ಮುಂಬರುವ ಬಸವ ಜಯಂತಿಯಂದು ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮಾಹಿತಿ ನೀಡಿದ್ದಾರೆ. ‘ಬಾಲ ನಟ, ನಾಯಕ ನಟ, ಹಿನ್ನೆಲೆ ಗಾಯಕ ಹಾಗೂ ನಿರ್ಮಾಪಕರಾಗಿ ಪುನೀತ್ ರಾಜ್ಕುಮಾರ್ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಾಮಾಜಿಕ ಜಾಗೃತಿಯ ಪ್ರಚಾರಕರಾಗಿಯೂ ಸಮಾಜ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆ ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದರು.
ಪ್ರಶಸ್ತಿಯು 5 ಲಕ್ಷ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಶರಣರು ನ.10ರಂದು ಪುನೀತ್ ರಾಜ್ಕುಮಾರ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ ಎಂದು ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ