ಮಾಜಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ಅಂಗೀಕರಿಸಿದ ಕಾಂಗ್ರೆಸ್‌

ಚಂಡೀಗಡ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿ ಅಂಗೀಕರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಅವರಿಗೆ ಬರೆದ ಏಳು ಪುಟಗಳ ಪತ್ರದಲ್ಲಿ ಟ್ವಿಟ್ಟರಿನಲ್ಲಿ ಸಾರ್ವಜನಿಕವಾಗಿ ಪ್ರಕಟಿಸಿದ್ದು, ಪಂಜಾಬ್ ಕಾಂಗ್ರೆಸ್‍ನ ನೂತನ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರನ್ನು ಪಾಕಿಸ್ತಾನದ ಆಪ್ತ ಮತ್ತು ಸಂಶಯಾಸ್ಪದ ವ್ಯಕ್ತಿ ಹರೀಶ್ ಎಂದು ಬಣ್ಣಿಸಿದ್ದಾರೆ. ಹರೀಶ ರಾವತ್, ಎಐಸಿಸಿ ರಾಜ್ಯ ಉಸ್ತುವಾರಿ.
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಗಾಂಧಿ ಅವರ ನಡವಳಿಕೆಯಿಂದ ನೋವಾಗಿದೆ. ತನ್ನ ಪದಚ್ಯುತಿಗೊಳಿಸಿ ಕಾಂಗ್ರೆಸ್ ಹೈಕಮಾಂಡ್ ಮಧ್ಯರಾತ್ರಿ ಸಂಚು ನಡೆಸಿದೆ. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಅಮರಿಂದರ್ ಹೇಳಿದ್ದರು.
ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿನ ಜಗಳದ ನಡುವೆ ಅಮರಿಂದರ್ ಸಿಂಗ್ ಸೆಪ್ಟೆಂಬರಿನಲ್ಲಿ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ತಮ್ಮ ಸ್ವಂತ ಪಕ್ಷದ ಹೆಸರು ಘೋಷಿಸಿರುವ ಅಮರಿಂದ್ ಸಿಂಗ್ ಪಂಜಾಬ್ ಲೋಕ ಕಾಂಗ್ರೆಸ್ ಎಂದು ಹೆಸರಿಸಿದ್ದು, ತಮ್ಮ ಪಕ್ಷದ ನೋಂದಣಿ ಚುನಾವಣಾ ಆಯೋಗದ ಅನುಮೋದನೆಗಾಗಿ ಬಾಕಿ ಇದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement