ಕೇಂದ್ರದ ಸೂಚನೆ ನಂತರ 9 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್ ಕಡಿತ

ನವದೆಹಲಿ: ಕೇಂದ್ರದಿಂದ ಸೂಚನೆ ಬಂದ ನಂತರ ಎನ್‌ಡಿಎ ಆಡಳಿತವಿರುವ 9 ರಾಜ್ಯಗಳು ನವೆಂಬರ್ 3 ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತ ಮಾಡಿವೆ.
“ಕರ್ನಾಟಕ ಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 7 ರೂಪಾಯಿ ಇಳಿಸಲು ನಿರ್ಧರಿಸಿದೆ. ಇದರಿಂದ ಬೊಕ್ಕಸಕ್ಕೆ 2,100 ಕೋಟಿ ರೂಪಾಯಿ ನಷ್ಟವಾಗುತ್ತದೆ” ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ ಅಂದಾಜು 95.50 ರೂಪಾಯಿ ಮತ್ತು ಡೀಸೆಲ್‌ಗೆ 81.50 ರೂಪಾಯಿ ವೆಚ್ಚವಾಗಲಿದೆ ಎಂದು ಅವರು ಹೇಳಿದರು.

ಅಸ್ಸಾಂ ಸರ್ಕಾರವು ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) 7 ರೂ.ಗಳಷ್ಟು ಕಡಿಮೆ ಮಾಡಿದೆ. ಬಿಹಾರ ಸರ್ಕಾರ ಕೂಡ ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು 1.30 ರೂ. ಮತ್ತು ಡೀಸೆಲ್ ಮೇಲೆ 1.90 ರೂ.ಗಳಷ್ಟು ಕಡಿಮೆ ಮಾಡುವುದಾಗಿ ಘೋಷಿಸಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಟ್ವಿಟ್ಟರ್‌ನಲ್ಲಿ “ಗೌರವಾನ್ವಿತ ಪ್ರಧಾನಿ ನರೇಂದ್ರಮೋದಿ ಅವರ ನಿರ್ಧಾರಕ್ಕೆ ಅನುಗುಣವಾಗಿ, ಅಸ್ಸಾಂ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ತಕ್ಷಣವೇ ಜಾರಿಗೆ ಬರುವಂತೆ 7 ರೂ ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಅಬಕಾರಿ ಸುಂಕದ ಮೇಲೆ 5 ರೂ. ಮತ್ತು ರೂ 10 ಕಡಿತದ ಜೊತೆಗೆ ಪೆಟ್ರೋಲ್ ಮೇಲೆ ರೂ 1.3 ಮತ್ತು ಡೀಸೆಲ್ ಮೇಲೆ ರೂ 1.90 ರಷ್ಟು ರಾಜ್ಯ ವ್ಯಾಟ್ ಅನ್ನು ಮತ್ತಷ್ಟು ಕಡಿತಗೊಳಿಸಲಾಗುತ್ತದೆ. ಬಿಹಾರದಲ್ಲಿ ಪರಿಣಾಮಕಾರಿಯಾಗಿ ಪೆಟ್ರೋಲ್ 6.30 ರೂ ಮತ್ತು ಡೀಸೆಲ್ 11.90 ರೂ ಅಗ್ಗವಾಗಲಿದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಮತ್ತು ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಗೋವಾ ಸರ್ಕಾರ ಕೂಡ ಇದನ್ನು ಅನುಸರಿಸಿ ಪೆಟ್ರೋಲ್ ಮೇಲೆ 7 ರೂ. ಮತ್ತು ಡೀಸೆಲ್ ಮೇಲೆ 7 ರೂ. ಹೆಚ್ಚುವರಿ ಕಡಿತ ಮಾಡಿದೆ. ಆ ಮೂಲಕ ಡೀಸೆಲ್ ಬೆಲೆಯನ್ನು ಲೀಟರ್‌ಗೆ 17 ರೂ. ಮತ್ತು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 12 ರೂ. ಕಡಿಮೆ ಮಾಡಿದೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಹೇಳಿದ್ದಾರೆ.
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಪ್ರತಿ ಲೀಟರ್‌ಗೆ 7 ರೂ.ಕಡಿತ ಮಾಡಿದ್ದಾರೆ.
ಏತನ್ಮಧ್ಯೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 5 ಮತ್ತು 10 ರೂಪಾಯಿಗಳ “ಸಣ್ಣ ಮಾರ್ಜಿನ್” ಮೂಲಕ ಕಡಿತಗೊಳಿಸುವ ಕೇಂದ್ರದ ನಿರ್ಧಾರವು “ಮುಖ ಉಳಿಸುವ ತಾತ್ಕಾಲಿಕ ಕ್ರಮ” ಎಂದು ಕೇರಳ ಹಣಕಾಸು ಸಚಿವ ಕೆ ಎನ್ ಬಾಲಗೋಪಾಲ್ ಬುಧವಾರ ಹೇಳಿದ್ದಾರೆ.
ಇದಕ್ಕೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ವಿಧಿಸಲಾಗಿದ್ದ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಮೂಲಕ ಪೆಟ್ರೋಲ್ ಬೆಲೆಯನ್ನು 5 ರೂ. ಮತ್ತು ಡೀಸೆಲ್ ಬೆಲೆಯನ್ನು 10 ರೂ.ಗಳಿಗೆ ಇಳಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement