ಮಹತ್ವದ ನಿರ್ಧಾರ.. ಎಲ್‌ಕೆಜೆ -ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ: ನವೆಂಬರ್ 8ರಿಂದ ಭೌತಿಕ ತರಗತಿ ಶುರು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್‌ಸಿಗ್ನಲ್ ನೀಡಿದೆ. ನವೆಂಬರ್ 8 ರಿಂದ ಎಲ್‌ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
08-11-2021ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ತಮ್ಮ ದೈನಂದಿನ ವೇಳಾಪಟ್ಟಿಯಂತೆ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ( LKG and UKG School Reopen ) ಆರ್ಧ ದಿನ ಭೌತಿಕ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ರಾಜ್ಯಾದ್ಯಂತ ಅಂಗವಾಡಿ ಕೇಂದ್ರಗಳನ್ನು ದಿನಾಂಕ 08-11-2021ರಿಂದ ಭೌತಿಕವಾಗಿ ಪ್ರಾರಂಭಿಸಲು ಆದೇಶಿಸಿರುವ ಹಿನ್ನಲೆಯಲ್ಲಿ, ರಾಜ್ಯದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳಲ್ಲಿನ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಶಾಲೆಗಳ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ, ಈ ಕೆಳಕಂಡ ಕ್ರಮ ವಹಿಸಲು ಸೂಚಿಸಲಾಗಿದೆ.
08-11-2021ರಿಂದ ಅರ್ಧ ದಿನ ಎಲ್ಲಾ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸುವುದು.
ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಈ ತರಗತಿಗಳನ್ನು ಭೌತಿಕವಾಗಿ ಪ್ರಾರಂಭಿಸಬೇಕು ಎಂದು ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ಶಾಲೆಗಳಲ್ಲಿ ಹಾಜರಾಗುವ ಎಲ್ ಕೆ ಜೆ ಮತ್ತು ಯುಕೆಜಿ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.
ಶಾಲೆಗೆ ಹಾಜರಾಗುವ ಎಲ್ಲಾ ಶಿಕ್ಷಕರು, ಇತರೆ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ವಹಿಸುವುದು.
ಹಾಗೂ ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
ಶಾಲೆ ಪ್ರಾರಂಭಕ್ಕೂ ಮುನ್ನಾ ಸೋಂಕು ನಿವಾರಕ ದ್ರಾವಣಗಳಿಂದ ಶುದ್ಧೀಕರಿಸುವುದು, ಸ್ಯಾನಿಟೈಸ್ ಮಾಡುವುದು.
ಮಕ್ಕಳಿಗೆ ಮನೆಯಿಂದಲೇ ಉಪಾಹಾರ, ಮಕ್ಕಳು ಕುಡಿಯುವ ಶುದ್ಧ ನೀರನ್ನು ಮನೆಯಿಂದಲೇ ತರುವಂತೆ ಎಲ್ಲಾ ಪೋಷಕರಿಗೆ ಸೂಚಿಸುವುದು.
ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.
ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್ ಕೆ ಜೆ ಮತ್ತು ಯುಕೆಜಿ ತರಗತಿಗಳ ನಿರ್ವಹಣೆಗೆ ಸಲಹಾತ್ಮಕ ವೇಳಾಪಟ್ಟಿಯಂತೆ
ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30ರ ವರೆಗೆ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸುವಂತೆ ಸೂಚಿಸಲಾಗಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement