ಸಹಾಯಕ ಪ್ರಾಧ್ಯಾಪಕ ಹುದ್ದೆೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆೆಗಳ ನೇರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿಯನ್ನು ನ. 20ರ ವರೆಗೆ ವಿಸ್ತರಿಸಲಾಗಿದ್ದು, ಶುಲ್ಕ ಪಾವತಿ ಅವಧಿಯನ್ನು ನ. 30ರ ವರೆಗೆ ವಿಸ್ತರಿಸಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ನ.6ರ ವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ, ನ.2ರಂದು ಕೆ-ಸೆಟ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅರ್ಹ ಅಭ್ಯರ್ಥಿಗಳಿಗೆ ಹಾಗೂ ಈ ವರೆಗೆ ಅರ್ಜಿ ಸಲ್ಲಿಸದ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದೆ. ಅಧಿಸೂಚನೆಯಲ್ಲಿ ನೀಡಿರುವ ಮಾನದಂಡಗಳನ್ನು ಅನುಸರಿಸಿ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಾಧಿಕಾರವು (ಕೆಇಎ) ಪ್ರಕಟಣೆ ತಿಳಿಸಿದೆ.

0 / 5. 0

ಪ್ರಮುಖ ಸುದ್ದಿ :-   ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement