ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ಆರ್ ಆದೇಶ ಹೊರಡಿಸಿದ್ದು, 2021-22 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ 18,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದ್ದಾರೆ ಎಂದು ಆಂದೊಲನ.ಇನ್‌ ವರದಿ ಮಾಡಿದೆ.
ವರ್ಗಾವಣೆ ಪ್ರಕ್ರಿಯೆ ಜಾರಿಯಲ್ಲಿರುವುದರಿಂದ ಖಾಲಿ ಹುದ್ದೆಗೆ ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ಕೂಡಲೇ ಅತಿಥಿ ಶಿಕ್ಷಕರನ್ನು ಸಂಬಂಧಪಟ್ಟ ಶಾಲೆಯಿಂದ ಬಿಡುಗಡೆ ಮಾಡಿ ತಾಲೂಕಿನ ಒಳಗೆ ಅಗತ್ಯ ಖಾಲಿ ಇರುವ ಶಾಲೆಯಲ್ಲಿ ಮುಂದುವರಿಸಲು ನಿಯಮಾನುಸಾರ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement