ಕರ್ನಾಟಕದಲ್ಲಿ ನವೆಂಬರ್‌ 8ರ ವರೆಗೆ ಭಾರೀ ಮಳೆ ಸಾಧ್ಯತೆ :ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ನವೆಂಬರ್‌ 8ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಮುಂದಿನ ಮೂರು ದಿನ ಮಳೆಯ ಆರ್ಭಟ ಇರಲಿದೆ. ವಿಸೇಷವಾಗಿ ಕೇರಳ, ಲಕ್ಷದ್ವೀಪ ಹಾಗೂ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು,ಕೊಡಗು, ಹಾಸನ, ಗದಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದ್ದು ಕರಾವಳಿ ಹಾಗೂ ಮಲೆನಾಡಿನಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement