ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಸ್‌ ಪಡೆದ ನವಜೋತ್ ಸಿಂಗ್ ಸಿಧು

ಚಂಡೀಗಡ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಒಂದು ತಿಂಗಳ ನಂತರ ನವಜೋತ್ ಸಿಂಗ್ ಸಿಧು ಇಂದು (ಶುಕ್ರವಾರ) ತಮ್ಮ ರಾಜೀನಾಮೆ ಹಿಂಪಡೆದಿರುವುದಾಗಿ ಪ್ರಕಟಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ನಾನು ರಾಜೀನಾಮೆಯನ್ನು ವಾಪಸ್ ಪಡೆಯುವುದಾಗಿ ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದೇನೆ. ನಾನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷನಾಗಿ ಮುಂದುವರೆಯಲಿದ್ದೇನೆ ಎಂದು ತಿಳಿಸಿದ್ದಾರೆ.
ಸಿಧು ಅವರು ಸೆಪ್ಟೆಂಬರ್ 28ರಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರದಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು. ನವಜೋತ್ ಸಿಂಗ್ ಸಿಧು ತಮ್ಮ ಪತ್ರದಲ್ಲಿ, ನಾನು ಪಂಜಾಬ್‌ನ ಭವಿಷ್ಯದ ಜೊತೆಗೆ ಎಂದಿಗೂ ರಾಜಿ ಮಾಡಿಕೊಳ್ಳಲಾರೆ ಎಂದು ಬರೆದಿದ್ದರು. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇವೆಯನ್ನು ಮುಂದುವರಿಸುತ್ತೇನೆ ಎಂದು ಬರೆದುಕೊಂಡಿದ್ದರು.
ಚರಣ್​ಜಿತ್ ಸಿಂಗ್ ಚನ್ನಿ ನೇತೃತ್ವದ ಹೊಸ ರಾಜ್ಯ ಸಚಿವ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ಕೆಲವೇ ದಿನಗಳಲ್ಲಿ ಸಿಧು ಅವರು ಸೆಪ್ಟೆಂಬರ್ 28ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈಗ ಒಂದು ತಿಂಗಳ ನಂತರ ಸಿಧು ತಮ್ಮ ರಾಜೀನಾಮೆಯನ್ನು ಹಿಂಪಡೆದಿರುವುದಾಗಿ ಪ್ರಕಟಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : ಕಾಂಗ್ರೆಸ್​​​ಗೆ ಮತ್ತೊಂದು ಶಾಕ್ ; ಸ್ಪರ್ಧಿಸಲು ನಿರಾಕರಿಸಿ ಟಿಕೆಟ್‌ ವಾಪಸ್‌ ಮಾಡಿದ ಕಾಂಗ್ರೆಸ್​​ ಅಭ್ಯರ್ಥಿ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement