ರಾಜ್ಯ ಸರ್ಕಾರಿ ನೌಕರರು ಸಕ್ರಮ ಪ್ರಾಧಿಕಾರಕ್ಕೆ ಸಲ್ಲಿಸದೆ ಖರೀದಿಸಿದ ಸ್ಥಿರಾಸ್ತಿ, ಚರಾಸ್ತಿ ಮಾಹಿತಿ 2 ತಿಂಗಳೊಳಗೆ ಸಲ್ಲಿಸಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ತಮ್ಮ ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಹೆಸರಿನಲ್ಲಿ ಸಕ್ರಮ ಪ್ರಾಧಿಕಾರಕ್ಕೆ ಸಲ್ಲಿಸದೆ ಖರೀದಿಸಿದ ಸ್ಥಿರಾಸ್ತಿ, ಚರಾಸ್ತಿಯ ವ್ಯವಹಾರಗಳನ್ನು ಎರಡು ತಿಂಗಳೊಳಗೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರತ್ನ ವಿ. ಪಾಟೀಲ್ ಅವರು ಸುತ್ತೋಲೆ ಹೊರಡಿಸಿದ್ದು, 2021ರ ನಿಯಮಗಳ ನಿಯಮ 24(3)ರ ಅನುಸಾರ ತನ್ನೊಂದಿಗೆ ಅಧಿಕೃತ ವ್ಯವಹಾರವನ್ನು ಹೊಂದಿರುವ ವ್ಯಕ್ತಿಯನ್ನು ಹೊರತುಪಡಿಸಿ, ಬೇರೆ ಮೂಲಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾವುದೇ ಸದಸ್ಯನ ಹೆಸರಿನಲ್ಲಾಗಲಿ ಗುತ್ತಿಗೆಯ, ಅಡಮಾನದ, ಖರೀದಿಯ, ಮಾರಾಟದ, ಉಡುಗೋರೆಯ ಮೂಲಕ ಅಥವಾ ಅನ್ಯಥಾ ಸ್ಥಿರ ಸ್ವತ್ತನ್ನು ಅರ್ಜಿಸುವ ಅಥವಾ ವಿಲೇ ಮಾಡುವ ಬಗ್ಗೆ ನಿಯಮಿಸಲಾದ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕಾಗುತ್ತದೆ.
ಒಂದು ವೇಳೆ ಸಮರ್ಥನೀಯ ಕಾರಣಗಳಿಂದಾಗಿ ನಿಯಮಿತ ಪ್ರಾಧಿಕಾರಿಗೆ ಮೊದಲೇ ತಿಳಿಸದೇ ಸ್ಥಿರ ಸ್ವತ್ತನ್ನು ಖರೀದಿಸಿದ್ದಲ್ಲಿ ಅಥವಾ ಮಾರಾಟ ಮಾಡಿದ್ದಲ್ಲಿ, ಅಂತಹ ವ್ಯವಹಾರ ಕೈಗೊಂಡ ಎರಡು ತಿಂಗಳೊಳಗಾಗಿ ವಿವರಗಳು, ಪೂರಕ ದಾಖಲೆಗಳು ಮತ್ತು ಸಮರ್ಥನೀಯ ಕಾರಣಗಳೊಂದಿಗೆ ನಿಯಮಿತ ಪ್ರಾಧಿಕಾರಿಗೆ ವರದಿ ಮಾಡಲು ಅವಕಾಶ ಕಲ್ಬಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರನು ನೀಡಿದ ಕಾರಣಗಳು ಅಂಗೀಕಾರ್ಹವೆಂದು ತೃಪ್ತಿಪಟ್ಟಲ್ಲಿ, ಸರ್ಕಾರಿ ನೌಕರನು ಸಲ್ಲಿಸಿದ ದಾಖಲೆಗಳು ಹಾಗೂ ವಿವರಗಳನ್ನು ಪರಿಶೀಲಿಸಿ ಅಂತಹ ವ್ಯವಹರಣೆಯನ್ನು ಘಟನೋತ್ತರವಾಗಿ ನಿಯಮಿತ ಪ್ರಾಧಿಕಾರವು ಟಿಪ್ಪಣಿ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement