ಶಿವಮೊಗ್ಗ: ಬೈಕ್- ಸಾರಿಗೆ ಬಸ್‌ ಡಿಕ್ಕಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ನಂದಿನ ಡೈರಿ ಬಳಿಯಲ್ಲಿ ಸಾರಿಗೆ ಸಂಸ್ಥೆ ಬಸ್‌ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ
ಮೃತರನ್ನು ಮಂಜುನಾಥ್ (28) ಮತ್ತು ಅಂತೋನಿ (35) ಎಂದು ಗುರುತಿಸಲಾಗಿದೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ ನಗರದ ಸಮೀಪದ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿನ ನಂದಿನಿ ಡೈರಿ ಬಳಿಯ ಮಾಚೇನಹಳ್ಳಿಯ ಬಳಿ, ಹಿಂಬದಿಯಿಂದ ಬಂದಂತ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

0 / 5. 0

ಪ್ರಮುಖ ಸುದ್ದಿ :-   ಧರ್ಮಸ್ಥಳ ಪ್ರಕರಣ; ಚಿನ್ನಯ್ಯ ನನಗೆ ಕರೆ ಮಾಡಿದ್ದ, ಆದರೆ ಎಸ್‌ಐಟಿ ಸಂಪರ್ಕಿಸಲು ಹೇಳಿದ್ದೆ- ನಟ ಪ್ರಕಾಶ್ ರಾಜ

ನಿಮ್ಮ ಕಾಮೆಂಟ್ ಬರೆಯಿರಿ

advertisement