ಅಹ್ಮದ್‌ನಗರ: ಮಹಾರಾಷ್ಟ್ರದ ಅಹ್ಮದ್‌ನಗರದ ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಶನಿವಾರ ಮಧ್ಯಾಹ್ನ ಭಾರಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 10 ಕೋವಿಡ್-19 ರೋಗಿಗಳು – ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಇದೀಗ ಬೆಂಕಿಯನ್ನು ನಂದಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಭೋಸಲೆ ತಿಳಿಸಿದ್ದಾರೆ. 25 ಜನರನ್ನು ದಾಖಲಿಸಿದ ಕೋವಿಡ್ ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಯಿತು ಎಂದು ಪ್ರಾಥಮಿಕ ತನಿಖೆ ಸೂಚಿಸುತ್ತದೆ. 10 ರೋಗಿಗಳು ಮೃತಪಟ್ಟಿದ್ದು, ಕೆಲವರು ರೋಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಳಿದ ರೋಗಿಗಳನ್ನು ಸಮೀಪದ ಇನ್ನೊಂದು ಆಸ್ಪತ್ರೆಗೆ ಕೊವಿಡ್ 19 ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭೋಸ್ಲೆ ಮಾಹಿತಿ ನೀಡಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ .ಆದರೆ ಶಾರ್ಟ್ಸರ್ಕ್ಯೂಟ್ನಿಂದಲೇ ಅಗ್ನಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ.
ಹಿರಿಯ ಪೊಲೀಸ್ ಮತ್ತು ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ