ಗ್ಯಾಸ್ ಸಿಲಿಂಡರ್ ಸ್ಫೋಟ: 7 ಜನರಿಗೆ ಗಂಭೀರ ಗಾಯ

ಬೆಂಗಳೂರು: ಮನೆಯಲ್ಲಿದ್ದ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು 7 ಜನರು ಗಾಯಗೊಂಡ ಘಟನೆ ಬೆಂಗಳೂರು ಸಮೀಪದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ.
ಜಿಗಣಿ ಪೊಲೀಸ್ ಠಾಣೆ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ಮಂಜುನಾಥ್ ರೆಡ್ಡಿ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ಇದ್ದ ಉತ್ತರ ಭಾರತ ಮೂಲದ ಏಳು ಕಾರ್ಮಿಕರು ಗಾಯಗೊಂಡಿದ್ದಾರೆ.
ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು, ಮನೆ ಬೆಂಕಿಯಿಂದ ಹೊತ್ತಿ ಉರಿದಿದೆ. ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಜಿಗಣಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉತ್ತರ ಭಾರತ ಮೂಲದ ಏಳು ಕಾರ್ಮಿಕರು 2 ವರ್ಷಗಳಿಂದ ಬಾಡಿಗೆ ಇದ್ದರು ಎನ್ನಲಾಗಿದೆ. ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

0 / 5. 0

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ನಿಮ್ಮ ಕಾಮೆಂಟ್ ಬರೆಯಿರಿ

advertisement