ಕಾರವಾರ ಸಮೀಪ ಸಮುದ್ರದಲ್ಲಿ ಹೊತ್ತಿ ಉರಿದ ಬೋಟ್‌

ಕುಮಟಾ: ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಒಂದು ಬೆಂಕಿ ಹೊತ್ತಿಕೊಂಡ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪದ ಅರಬ್ಬೀ ಸಮುದ್ರದಲ್ಲಿ ಶುಕ್ರವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ಬೋಟಿನಲ್ಲಿ ತಾಂತ್ರಿಕ ದೋಷದ ಕಾರಣದಿಂದ ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಸಿಕ್ಕ ತಕ್ಷಣವೇ ಧಾವಿಸಿದ ಸ್ಥಳೀಯ ಕರಾವಳಿ ಕಾವಲು ಪಡೆ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಬೋಟಿನಲ್ಲಿದ್ದ ಎಲ್ಲ ಏಳು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಮೀನುಗಾರಿಕಾ ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡಾಗ ಐಎಫ್‌ಬಿ ವರದಾ ಕಾರವಾರ ಲೈಟ್‌ಹೌಸ್‌ನಿಂದ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿತ್ತು ಎಂದು ಮೂಲಗಳು ತಿಳಿಸಿವೆ.

ಕುಂದಾಪುರ ಮೂಲದ ಬೋಟ್‌ ಎಂದು ಹೇಳಲಾಗಿದ್ದು, ಬೋಟನ್ನು ಈಗ ಕಾರವಾರದ ಕಡಲತೀರಕ್ಕೆ ತರಲಾಗಿದೆ. ಬೋಟಿನಲ್ಲಿ ಯಾವ ಕಾರಣದಿಂದ ಬೆಂಕಿ ಕಾಣಿಸಿಕೊಂಡಿತು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement