ಆನೇಕಲ್: ಕ್ರಿಕೆಟ್ ಆಟವಾಡುತ್ತಿದ್ದಾಗ ಕೃಷಿ ಹೊಂಡಕ್ಕೆ ಬಿದ್ದ ಬಾಲನ್ನು ತೆಗೆಯಲು ಹೋಗಿ ಇಬ್ಬರು ಬಾಲಕರು ಸೇರಿದಂತೆ ಮೂವರು ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆಯಆನೇಕಲ್ ತಾಲೂಕಿನ ಇಗ್ಗಲೂರು ಬಳಿ ನಡೆದ ಬಗ್ಗೆ ವರದಿಯಾಗಿದೆ.
ಕೃಷಿ ಹೊಂಡಕ್ಕೆ ಬಿದ್ದ ಬಾಲ್ ತೆತೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದವನನ್ನು ರಕ್ಷಿಸಲು ಹೋಗಿ ಮೂವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಧೀಮಂತ ( 13), ಹೃಷಿಕೇಶ್ (9), ಅಮಿತ್ ಕುಮಾರ್ (31) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕೃಷಿ ಹೊಂಡಕ್ಕೆ ಬಿದ್ದು ಸಾವನಪ್ಪಿದ ಇಬ್ಬರು ಬಾಲಕರು, ಓರ್ವ ಯುವಕನ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಶಾಲೆಗೆ ರಜೆಯಿದ್ದ ಕಾರಣದಿಂದ ಕ್ರಿಕೆಟ್ ಆಡುತ್ತಿದ್ದ ಬಾಲಕರು ಕೃಷಿ ಹೊಂಡಕ್ಕೆ ಬಿದ್ದಿದ್ದ ಬಾಲ್ ಅನ್ನು ತೆಗೆಯಲು ಹೋದಾಗ ಈ ಘಟನೆ ನಡೆದಿದೆ. ಒಬ್ಬನನ್ನು ಬಚಾವ್ ಮಾಡಲು ಹೋಗಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ