ಭತ್ತಕ್ಕೆ 2500 ರೂ. ಬೆಂಬಲ ಬೆಲೆಗೆ ಆಗ್ರಹಿಸಿ ಹೆದ್ದಾರಿಯಲ್ಲೇ ಭತ್ತ ಬಡಿದು ರೈತರ ಪ್ರತಿಭಟನೆ

ಬ್ರಹ್ಮಾವರ : ಬೆಳೆದ ಭತ್ತಕ್ಕೆ 2500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕರಾವಳಿ ಭಾಗದ ರೈತರು ಹೋರಾಟ ನಡೆಸಿದ್ದಾರೆ. ಬ್ರಹ್ಮಾವರ ಬಸ್‌ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತ ಭತ್ತವನ್ನು ಮಂಚಕ್ಕೆ ಬಡಿಯುವ ಸರ್ಕಾರ ಕೂಡಲೇ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಬೆಳೆ ನೆಲಕಚ್ಚಿದೆ. ಭತ್ತಕ್ಕೂ ಸರಿಯಾದ ಬೆಲೆ ಮಾರುಕಟ್ಟೆಯಲ್ಲಿ ದೊರೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ರೈತರು ಹೋರಾಟಕ್ಕೆ ಇಳಿದಿದ್ದಾರೆ. ಸಾವಿರಾರು ಮಂದಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ರೈತ ಮುಖಂಡರು ತಮ್ಮ ಸಮಸ್ಯೆಯನ್ನು ಜನರ ಮುಂದೆ ಇಡುವ ಕಾರ್ಯವನ್ನು ಮಾಡಿದ್ದಾರೆ. ಇದೇ ವೇಳೆಯಲ್ಲಿ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿಯವರ ಮೂಲಕ ರಾಜ್ಯ ಸರಕಾರ ಭತ್ತಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಮನವಿಯನ್ನು ಸಲ್ಲಿಸಿದ್ದಾರೆ.
ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಬಾಳೆಕುದ್ರು ಶ್ರೀ ಮಠದ ನೃಸಿಂಹಾಶ್ರಮ ಸ್ವಾಮೀಜಿಯವರು ಮಾತನಾಡಿ, ದೇಶದ ಬೆನ್ನೆಲುಬು ಎಂದು ಕರೆಸಿಕೊಳ್ಳುವ ರೈತ ಬೆಳೆದ ಬೆಳೆಯ ಲಾಭ ಮಧ್ಯವರ್ತಿಗಳ ಪಾಲಾಗುತ್ತಿದೆ. ರೈತನಿಗೆ ತಾವು ಬೆಳೆದ ಬೆಳೆಗೆ ಸರಕಾರ ಬೆಂಬಲ ಬೇಲೆ ನೀಡುವುದರಲ್ಲಿ ಸರ್ಕಾರಕ್ಕೆ ನಷ್ಟ ಆಗುವುದಿಲ್ಲ ಎಂದಿದ್ದಾರೆ

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement