ಕರ್ನಾಟಕದಲ್ಲಿ ಇಂದು, ನಾಳೆ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 9ರ ವರೆಗೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇದು ಇನ್ನೂ ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನವೆಂಬರ್ 7 ರಿಂದ 9ರ ತನಕ ಭಾರೀ ಮಳೆಯಾಗಲಿದೆ. ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾಳೆ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಂಗಳೂರು,ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement