ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು; ಐವರ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ವೇಳೆ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ ಹಾಗೂ 322 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,89,952 ಕ್ಕೆ ಏರಿಕೆಯಾಗಿದೆ. ಒಟ್ಟು 29,43,809 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿರೆ. ಹಾಗೂ ಒಟ್ಟು 38,112 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8,002 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 151 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,52,831 ಕ್ಕೆ ಏರಿಕೆಯಾಗಿದೆ. 1 12,30,170 ಜನರು ಗುಣಮುಖರಾಗಿದ್ದಾರೆ. ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಈವರೆಗೆ 16,295 ಜನರ ಸಾವು ಸಂಭವಿಸಿದೆ. 6,365 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 151, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ಚಿತ್ರದುರ್ಗ 0, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 6, ಗದಗ 0, ಹಾಸನ 12, ಹಾವೇರಿ 0, ಕಲಬುರಗಿ 0, ಕೊಡಗು 4, ಕೋಲಾರ 2, ಕೊಪ್ಪಳ 0, ಮಂಡ್ಯ 5, ಮೈಸೂರು 17, ರಾಯಚೂರು 0, ರಾಮನಗರ 0, ಶಿವಮೊಗ್ಗ 2, ತುಮಕೂರು 4, ಉಡುಪಿ 5, ಉತ್ತರ ಕನ್ನಡ 12, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement