ನವೆಂಬರ್‌ 16 ರಂದು ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪುನೀತ ನಮನ ಕಾರ್ಯಕ್ರಮ

ಬೆಂಗಳೂರು: ಇತ್ತೀಚಿಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ನಮನ ಸಲ್ಲಿಸಲು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅದ್ದೂರಿ ಕಾರ್ಯಕ್ರಮ ಆಯೋಜನೆಗೆ ಸಿದ್ಧವಾಗಿದೆ. ನ.16 ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್ ನಮನ ಕಾರ್ಯಕ್ರಮ ಆಯೋಜಿಸಿದೆ.
ಗೀತ ನಮನ, ಗಾಯನ ನಮನ ಸೇರಿದಂತೆ ವಿವಿಧ ರೀತಿಯಲ್ಲಿ ಪುನೀತ್ ಅವರಿಗೆ ಗೌರವ ಸಲ್ಲಿಸಲಾಗುವುದು ಎಂದು ಫಿಲ್ಮ್ ಚೆಂಬರ್ ಅಧ್ಯಕ್ಷರು ಮಾಹಿತಿ‌ ನೀಡಿದ್ದಾರೆ. ಪುನೀತ್ ನಮನ ಕಾರ್ಯಕ್ರಮದಲ್ಲಿ ರಾಜಕೀಯ ಕ್ಷೇತ್ರದ ಗಣ್ಯರು, ದಕ್ಷಿಣ ಭಾರತದ ಚಿತ್ರತಂಡದ ಸ್ಟಾರ್ ಗಳಾದ ರಜನಿಕಾಂತ್, ಕಮಲ್ ಹಾಸನ್, ವಿಜಯ್, ಧನುಷ್ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ.
ಗಾಯತ್ರಿ ವಿಹಾರದ ನಾಲ್ಕನೇ ಗೇಟ್ ನಿಂದ ಎಲ್ಲರಿಗೂ ಪ್ರವೇಶಾವಕಾಶವಿದ್ದು, 2000 ಜನರು ದೀಪ ಬೆಳಗಿ ಪುನೀತ್ ಗೆ ದೀಪನಮನ ಸಲ್ಲಿಸಲಿದ್ದಾರೆ. ಈ ವಿಶೇಷ ಸಂದರ್ಭಕ್ಕಾಗಿ ಸಾಹಿತ್ಯಕಾರ ನಾಗೇಂದ್ರ್ ಪ್ರಸಾದ್ ವಿಶೇಷವಾದ ೫ ನಿಮಿಷದ ಹಾಡೊಂದನ್ನು ಬರೆದಿದ್ದಾರೆ. ಅಷ್ಟೇ ಅಲ್ಲ ಪುನೀತ್ ಜೀವನಗಾಥೆಯೂ ನುಡಿನಮನದಲ್ಲಿ ಪ್ರದರ್ಶಿತಗೊಳ್ಳಲಿದೆ.

ಪ್ರಮುಖ ಸುದ್ದಿ :-   ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ : ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್‌ ಬುಲಾವ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement