ನ.12ರ ವರೆಗೆ ಅನಿಲ್ ದೇಶ್ಮುಖ್ ಇಡಿ ವಶಕ್ಕೆ ನೀಡಿದ ಬಾಂಬೆ ಹೈಕೋರ್ಟ್‌

ಮುಂಬೈ: ಅಕ್ರಮ ಹಣ ವರ್ಗಾವಣೆಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶ್ ಮುಖ್ ಅವರನ್ನು ನವೆಂಬರ್ ‌12ರ ತನಕ ‌ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಬಾಂಬೆ ಹೈಕೋರ್ಟ್ ನೀಡಿದೆ.
ಭಾನುವಾರದ ದಿನವೂ ವಿಚಾರಣೆ ನಡೆಸಿದ ರಜಾಕಾಲದ ಪೀಠ ಅನಿಲ್ ದೇಶ್ ಮುಖ್ ಅವರನ್ನು ಇಡಿ ವಶಕ್ಕೆ ನೀಡಿದೆ.
ಗೃಹ‌ಸಚಿವರಾಗಿದ್ದ ಅವಧಿಯಲ್ಲಿ ಅನಿಲ್ ದೇಶ್ ಮುಖ್ಮುಂಬೈನ ವಿವಿಧ ಬಾರ್ ಗಳು ಮತ್ತು ರೆಸ್ಟೋರೆಂಟ್ ಗಳಿಂದ ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಮೂಲಕ 4.7 ಕೋಟಿ ರೂ. ಹಣವನ್ನು ಅಕ್ರಮವಾಗಿ ಸ್ವೀಕರಿಸಿದ್ದರು ಎಂದು ಇಡಿ ಹೇಳಿದೆ.
ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ದೂರು ದಾಖಲಾಸಿಕೊಂಡು ಬಂಧಿಸಿತ್ತು. ಹೆಚ್ಚಿನ ವಿಚಾರಣೆಗೆ ನೀಡುವಂತೆ ಜಾರಿ ನಿರ್ದೇಶನಾಲಯ ಬಾಂಬೆ ಹೈಕೋರ್ಟ್ ಮೊರೆ ಹೋಗಿತ್ತು.
ರಜಾ ಕಾಲದ ಪೀಠದ ನ್ಯಾಯಮೂರ್ತಿ ಮಾದವ್ ಜಮಾದಾರ್ ನೇತೃತ್ವದ ಪೀಠ ,ಮಾಜಿ ಗೃಹ ಸಚಿವ ಅನಿಲ್ ದೇಶ್ ಅವರಿಗೆ ನವೆಂಬರ್ 12 ರ ವರೆಗೆ ಜಾರಿ ನಿರ್ದೇಶನದ ವಶಕ್ಕೆ ಒಪ್ಪಿಸಿ ಆದೇಶಿಸಿದೆ.
ಶನಿವಾರ ‌ ಮುಂಬೈ ಸೇಶನ್‌ ಕೋರ್ಟ್ ಅನಿಲ ದೇಶಮುಖ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಇಡಿ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement