ಹೋಟೆಲ್-ರೆಸ್ಟೋರೆಂಟ್​​ಗಳಿಗೆ ಶೇ.50ರಷ್ಟು ಆಸ್ತಿ ತೆರಿಗೆ ರಿಯಾಯಿತಿ; ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : 2021-22 ನೇ ಸಾಲಿನ ಹಣಕಾಸು ವರ್ಷದಲ್ಲಿ ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ ಗಳು ಪಾವತಿಸುವ ಆಸ್ತಿ ತೆರಿಗೆಯಿಂದ ( ಬಿಬಿಎಂಪಿ ಹೊರತುಪಡಿಸಿ) ಶೇ 50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊರೋನಾ ಎರಡು ಅಲೆಗಳಿಂದ ಆರ್ಥಿಕ ಸಂಕಷ್ಟ ಎದುರಿಸಿರುವ ಈ ವಲಯಗಳ ಸುಧಾಕರಣೆಗಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಎಲ್. ಪ್ರಸಾದ್ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರ ಕೆಲವು ಷರತ್ತಿಗೊಳಪಟ್ಟು ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್‌ ಮತ್ತು ಮನರಂಜನಾ ಪಾರ್ಕ್ ಗಳು ಪಾವತಿಸುವ ಆಸ್ತಿ ತೆರಿಗೆಯಿಂದ ಶೇ.50ರಷ್ಟು ರಿಯಾಯಿತಿ ನೀಡಿ ಆದೇಶ ಹೊರಡಿಸಿದ್ದಾರೆ.
ಹೋಟೆಲ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ ಗಳ ಮಾಲೀಕರು ಶೇ 50ರಷ್ಟು ಆಸ್ತಿ ತೆರಿಗೆ ಪಾವತಿ ಮಾಡಬೇಕು ಹಾಗೂ ಆದರೆ ಶೇ.50 ರಷ್ಟು ಆಸ್ತಿ ತೆರಿಗೆಯಿಂದ ರಿಯಾಯಿತಿ ಪಡೆಯಲು ಸಂಬಂಧಪಟ್ಟವರು ಅರ್ಜಿಯಲ್ಲಿ ಎಲ್ಲಿ, ಯಾವ ರೀತಿ ಸಲ್ಲಿಸಬೇಕು. ಯಾರಿಂದ ಪರಿಶೀಲನೆಗೆ ಒಳಗಾಗಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಈ ಆದೇಶದ ಅನುಬಂಧದಲ್ಲಿ ಲಗತ್ತಿಸುರುವ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಶೇ. 50ರಷ್ಟು ಆಸ್ತಿ ತೆರಿಗೆ ಪಾವತಿ ಮಾಡುವ ಹೊಟೇಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕಿನವರು ಕೆಟಿಟಿಎಫ್ ಕಾಯಿದೆ 8/1 ರ ಅನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೊಂದಾಯಿಸಬೇಕು, ಈ ಸಂಬಂಧ ವೆಬ್ ಸೈಟಿನಲ್ಲಿ ನೊಂದಣಿಯಾದ ಸದಸ್ಯರಿಗೆ ಈ ರಿಯಾಯಿತಿ ನೀಡುವಂತೆ ಆದೇಶಿಸಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆ ಆರ್ಥಿಕ ನಷ್ಟ ಅನುಭವಿಸಿದ ಹಿನ್ನೆಲೆ ಸರ್ಕಾರ ಆಸ್ತಿ ತೆರಿಗೆ ಪಾವತಿಯಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement