2015ರ ನಂತರ ಅತಿ ಹೆಚ್ಚು ಮಳೆ ದಾಖಲಿಸಿದ ಚೆನ್ನೈ ನಗರ, ಅನೇಕ ಪ್ರದೇಶಗಳು ಮುಳುಗಡೆ

ಚೆನ್ನೈ: ನಗರದಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ. ತಮಿಳುನಾಡಿನ ರಾಜಧಾನಿ ಚೆನ್ನೈ ನಗರವು 2015ರ ನಂತರದಲ್ಲಿ ಅತಿ ಹೆಚ್ಚು ಮಳೆಯನ್ನು ದಾಖಲಿಸಿದೆ.
ಲೋಕೋಪಯೋಗಿ ಇಲಾಖೆ ಚೆನ್ನೈನ ಚೆಂಬರಂಬಾಕ್ಕಂ ಜಲಾಶಯದ ಶೆಟರ್‌ಗಳನ್ನು ತೆರೆದಿದ್ದು, 500 ಕ್ಯೂಸೆಕ್‌ನಂತೆ ನೀರು ಬಿಡಲಾಗುತ್ತಿದೆ.
ಚೆಂಬರಂಬಾಕ್ಕಂನ ಜಲಾನಯನ ಪ್ರದೇಶದಲ್ಲಿ 52 ಮಿಮೀ ಮಳೆಯಾಗಿದ್ದು, ಜಲಾಶಯಕ್ಕೆ 600 ಕ್ಯೂಸೆಕ್‌ನಷ್ಟು ನೀರು ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ . ಪರಿಸ್ಥಿತಿಯನ್ನು ಅವಲೋಕಿಸಿದ್ದು, ಪರಿಹಾರ ಕಾರ್ಯದಲ್ಲಿ ಸಹಾಯ ಮಾಡಲು ತಮ್ಮ ಸಂಸದರು ಮತ್ತು ಶಾಸಕರಿಗೆ ಆದೇಶಿಸಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ಟಾಲಿನ್, ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಪೀಡಿತ ಪ್ರದೇಶಗಳಿಗೆ ಕಳುಹಿಸಲಾಗಿದೆ, ಪುನರ್ವಸತಿ ಕಾರ್ಯದಲ್ಲಿ ಭಾಗಿಯಾಗುವಂತೆ ಎಲ್ಲ ಶಾಸಕರು ಮತ್ತು ಸಂಸದರಿಗೆ ಸೂಚಿಸಲಾಗಿದೆ ಎಮದು ತಿಳಿಸಿದರು.
20 ಸೆಂ.ಮೀ ಮತ್ತು ಅದಕ್ಕಿಂತ ಹೆಚ್ಚಿನ ಮಳೆಯಿಂದಾಗಿ 11 ಜಿಲ್ಲೆಗಗಳು ಸೇರಿದಂತೆ ಚೆನ್ನೈ ಹಾನಿಗೊಳಗಾಗಿದೆ ಎಂದು ಅವರು ತಿಳಿಸಿದ್ದಾರೆ.
ಏತನ್ಮಧ್ಯೆ, ಸಿರುಕಲತ್ತೂರ್, ಕಾವನೂರ್, ಕುಂದ್ರತ್ತೂರ್, ತಿರುವುಮುಡಿವಕ್ಕಂ, ವಝುತ್ತಿಗೈಮೇಡು, ತಿರುನೀರ್ಮಲೈ, ಅಡ್ಯಾರ್ ಮತ್ತು ಅಂಬತ್ತೂರಿನ ಕೆಲವು ಭಾಗಗಳು, ಅಶೋಕ್ ಪಿಲ್ಲರ್ ಪ್ರದೇಶಗಳಲ್ಲಿನ ತಗ್ಗು ಪ್ರದೇಶಗಳಲ್ಲಿ ವಾಸಿಸುವವರಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಮೀಸಲು ಇಡಲಾಗಿದ್ದು, ರಾಜ್ಯ ಕಂದಾಯ ಇಲಾಖೆ ನೀರಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.
ಚಂಡಮಾರುತದ ಪರಿಚಲನೆಯಿಂದಾಗಿ ಚೆನ್ನೈ ನಗರದಲ್ಲಿ ಇಂದು(ಭಾನುವಾರ) ಭಾರಿ ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರ್‌ಕೆ ಜೆನಮಣಿ ದೃಢಪಡಿಸಿದ್ದಾರೆ. ಈಶಾನ್ಯ ಮಾನ್ಸೂನ್‌ನಿಂದಾಗಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ನವೆಂಬರ್ 9-11 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement