ಉಪಹಾರ್ ಚಿತ್ರಮಂದಿರ ದುರಂತ: ಅನ್ಸಲ್ ಸಹೋದರರಿಗೆ 7 ವರ್ಷ ಜೈಲು, 2.25 ಕೋಟಿ ರೂ.ದಂಡ ವಿಧಿಸಿದ ದೆಹಲಿ ಕೋರ್ಟ್‌

ನವದೆಹಲಿ: ಉಪಹಾರ್ ಸಿನಿಮಾ ಅಗ್ನಿ ದುರಂತ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚಿದ್ದಕ್ಕಾಗಿ ಕಳೆದ ತಿಂಗಳು ನ್ಯಾಯಾಲಯದಿಂದ ದೋಷಿಗಳೆಂದು ತೀರ್ಮಾನಿಸಲ್ಪಟ್ಟ ಉದ್ಯಮಿ ಸುಶೀಲ್ ಅನ್ಸಲ್ ಮತ್ತು ಗೋಪಾಲ್ ಅನ್ಸಲ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ 7 ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ 2.25 ಕೋಟಿ ರೂ.ಗಳ ದಂಡ ವಿಧಿಸಿದೆ. ಶಿಕ್ಷೆಯನ್ನು ವಿಧಿಸುವ ವೇಳೆ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ … Continued

ಜಿಂದಾಲ್‌ಗೆ 3,667 ಎಕರೆ ಜಮೀನು ಪರಭಾರೆ: ಸಂಪುಟ ಸಭೆ ನಿರ್ಧಾರ ಪ್ರಶ್ನಿಸಿದ್ದ ಪಿಐಎಲ್‌ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು: ವಿಜಯನಗರ ಜಿಲ್ಲೆಯ ಸಂಡೂರಿನಲ್ಲಿ ಜಿಂದಾಲ್ ಸೌತ್‌ವೆಸ್ಟ್ ಸ್ಟೀಲ್ ಕಾರ್ಪೊರೇಷನ್ ಲಿಮಿಟೆಡ್‌ಗೆ 3,667 ಎಕರೆ ಸರ್ಕಾರಿ ಜಮೀನು ಪರಭಾರೆ ಮಾಡಲು ರಾಜ್ಯ ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿತು. ಇಡೀ ಪ್ರಕರಣ ಮುಖ್ಯಮಂತ್ರಿಗಳ ಮುಂದೆ ಮರು ಪರಿಶೀಲನೆಯಲ್ಲಿದೆ ಎಂದು ಸರ್ಕಾರಿ ವಕೀಲರು ನೀಡಿದ ಹೇಳಿಕೆಯನ್ನು … Continued

ವಿಚಾರಣೆಗೆ ಉನ್ನತ ಅಧಿಕಾರಿಗಳು‌ ಗೈರು; ಬಂಧಿಸಿ ಕರೆತರುವ ಎಚ್ಚರಿಕೆ ನೀಡಿದ ಹೈಕೋರ್ಟ್‌

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಖುದ್ದು ಹಾಜರಾತಿಗೆ ಆದೇಶಿಸಿದ್ದ ಹೊರತಾಗಿಯೂ ಅವರು ಪೀಠದ ಮುಂದೆ ಉಪಸ್ಥಿತರಿರದ್ದಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಕೆಂಡಾಮಂಡಲವಾಗಿದ್ದು, ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ಹೈಕೋರ್ಟ್ ಸೂಚನೆ ನೀಡಿದರೂ‌ ಉನ್ನತ ಮಟ್ಟದ ಅಧಿಕಾರಿಗಳು ವಿಚಾರಣೆಗೆ … Continued

ಶ್ರೀನಗರದಲ್ಲಿ ಮುಂದುವರಿದ ನಾಗರಿಕರ ಹತ್ಯೆ; ಫಾರ್ಮಸಿ ಉದ್ಯೋಗಿಯನ್ನು ಗುಂಡಿಕ್ಕಿ ಕೊಂದ ಉಗ್ರರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಗ್ಧ ನಾಗರಿಕರ ಹತ್ಯೆ ಮುಂದುವರಿದಿದೆ. ಸೋಮವಾರ ಸಂಜೆ ಶ್ರೀನಗರದ ಬೊಹ್ರಿ ಕಡಾಲ್​ ಎಂಬ ಏರಿಯಾದಲ್ಲಿರುವ ಅಂಗಡಿಯೊಂದರ ಹೊರಗೆ ನಾಗರಿಕನೊಬ್ಬನಿಗೆ ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತನನ್ನು ಮೊಹಮ್ಮದ್​ ಇಬ್ರಾಹಿಂ ಖಾನ್​ ಎಂದು ಗುರುತಿಸಲಾಗಿದ್ದು, ಮೂಲತಃ ಬಂಡಿಪೋರಾದವರು ಎನ್ನಲಾಗಿದೆ. ಅವರು ಸೇಲ್ಸ್​ಮ್ಯಾನ್​ ಆಗಿ ಕೆಲಸ ಮಾಡುತ್ತಿದ್ದರು. ಉಗ್ರರು ಇಬ್ರಾಹಿಂ ಖಾನ್​​ರ ಹೊಟ್ಟೆಗೆ … Continued

ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರದಾನ

ನವದೆಹಲಿ: ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರದಾನ ಮಾಡಲಾಯಿತು. 2019 ರ ಡಿ.29 ರಂದು ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮಿಗಳು ಇಹಲೋಕ ತ್ಯಜಿಸಿದ್ದರು. ಅಧ್ಯಾತ್ಮ ಕ್ಷೇತ್ರದಲ್ಲಿ ಅವರ ಕೊಡುಗೆ, ಸೇವೆಯನ್ನು ಗೌರವಿಸಿ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ನಾರಾಣಾಚಾರ್ಯ ಹಾಗೂ ಶ್ರೀಮತಿ … Continued

ಮಕ್ಕಳಿಗೆ ಝೈಕೋವ್-ಡಿ ಕೋವಿಡ್ ಲಸಿಕೆ: ಸರ್ಕಾರಕ್ಕೆ 1 ಡೋಸಿನ ಬೆಲೆ 265 ರೂ.

ನವದೆಹಲಿ: ಔಷಧ ತಯಾರಕ ಸಂಸ್ಥೆ ಝೈಡಸ್ ಕ್ಯಾಡಿಲಾ ತಾನು ಸರ್ಕಾರಕ್ಕೆ ಒಂದು ಕೋಟಿ ಡೋಸ್ ಗಳನ್ನು ಪ್ರತಿ ಡೋಸ್ ಗೆ 265 ರೂ.ಗಳಿಗೆ ಪೂರೈಕೆ ಮಾಡುತ್ತಿರುವುದಾಗಿ ಹೇಳಿದೆ. ವಿಶ್ವದ ಮೊದಲ ಪ್ಲಾಸ್ಮಿಡ್ ಡಿಎನ್ಎ ಲಸಿಕೆಯಾಗಿದ್ದು ಒಂದು ಕೋಟಿ ಡೋಸ್ ಗಳನ್ನು ಪೂರೈಕೆ ಮಾಡುವುದಕ್ಕೆ ಸರ್ಕಾರದಿಂದ ಆರ್ಡರ್ ಬಂದಿದೆ ಎಂದು ಕಂಪನಿ ತಿಳಿಸಿದೆ. ಸೂಜಿ-ಮುಕ್ತ ಲಸಿಕೆ ಜಿಎಸ್ … Continued

ದುಬೈ ಶೇಖ್‌ ಲುಕ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ…!: ವೀಕ್ಷಿಸಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದುಬೈ ಶೇಖ್ ಉಡುಪಿನಲ್ಲಿ ಸಖತ್‌ ಮಿಂಚಿದ್ದಾರೆ, ಡ್ರೆಸ್‌ ಧರಿಸಿ ಫೋಟೋ ಪೋಸ್‌ ಸಹ ನೀಡಿದ್ದಾರೆ.[ ಕಾಂಗ್ರೆಸ್ ಮುಖಂಡ ಮುನಾವರ್‌ ಖಾನ್ ಎಂಬುವವರ ಮನೆಗೆ ತೆರಳಿದ್ದ ವೇಳೆಯಲ್ಲಿ ಸಿದ್ದರಾಮಯ್ಯ ಅವರಿಗೆ ದುಬೈ ಶೇಖ್ ಉಡುಪು ತೊಡಿಸಲಾಯಿತು. ಅವರ ಒತ್ತಾಯಕ್ಕೆ ಮಣಿಸದ ಸಿದ್ದರಾಮಯ್ಯ ದುಬೈ ಶೇಖ್‌ ಡ್ರೆಸ್‌ ಧರಿಸಿದರು. ಇದು ನಡೆದದ್ದು … Continued

ಅನಂತ ಹೆಗಡೆ ಸೇರಿ ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಮೂವರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಸಿದ್ದಯ್ಯ ರಾಚಯ್ಯ ಹಾಗೂ ಶ್ರ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ಅಧಿಕಾರದ ಪ್ರಮಾಣ ವಚನ ಸ್ವೀಕರಿಸಿದರು. ಇಂದು (ಸೋಮವಾರ) ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ … Continued

ಕಿತ್ತೂರು ಕರ್ನಾಟಕ ನಾಮಕರಣ ಐತಿಹಾಸಿಕ ನಿರ್ಧಾರ : ಸೋಮಣ್ಣವರ

ಬೆಳಗಾವಿ : ಮುಂಬೈ ಕರ್ನಾಟಕ ಹೆಸರು ಬದಲಿಸಿ ಕಿತ್ತೂರು ಕರ್ನಾಟಕ ಎಂದು ಪುನರ್ ನಾಮಕರಣ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಐತಿಹಾಸಿಕ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಡಾ. ಎಸ್.ಬಿ.ಸೋಮಣ್ಣವರ ಶ್ಲಾಘಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬೆಳಗಾವಿ ಕಂದಾಯ ವಿಭಾಗದ 7 ಜಿಲ್ಲೆಗಳನ್ನು ಇದುವರೆಗೆ ಮುಂಬೈ ಕರ್ನಾಟಕ ಎಂದೇ … Continued

ಎಲ್‌ಕೆಜಿ -ಯುಕೆಜಿ ಮಕ್ಕಳನ್ನು ಆರತಿ ಮಾಡಿ ಸಿಹಿ ಹಂಚುವ ಮೂಲಕ ಸ್ವಾಗತ

ಧಾರವಾಡ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳನ್ನು ಆರತಿ ಮಾಡಿ, ಸಿಹಿ ಹಂಚುವ ಮೂಲಕ ಸ್ವಾಗತಿಸಲಾಯಿತು. ಧಾರವಾಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮೋಹನಕುಮಾರ ಹಂಚಾಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ ಪದಕಿ ಹಾಗೂ ಪ್ರಾಚಾರ್ಯೆ ವಿದ್ಯಾ ಕೊಲ್ಹಾಪುರೆ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.