ಅನಂತ ಹೆಗಡೆ ಸೇರಿ ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಮೂವರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತ ರಾಮನಾಥ ಹೆಗಡೆ, ಸಿದ್ದಯ್ಯ ರಾಚಯ್ಯ ಹಾಗೂ ಶ್ರ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ಅಧಿಕಾರದ ಪ್ರಮಾಣ ವಚನ ಸ್ವೀಕರಿಸಿದರು.
ಇಂದು (ಸೋಮವಾರ) ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಎಸ್ ಬೊಮ್ಮಾಯಿ, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಿತು ರಾಜ್
ಅವಸ್ಥಿ, ಕರ್ನಾಟಕದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಮೊದಲಾದವರಿ ಇದ್ದರು.

5 / 5. 1

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement